Thursday, August 6, 2026

BDA Apartments

Home Front Page ಮುಂದೆ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು- ಹೊಸಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ.

ಮುಂದೆ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಬರಬಹುದು- ಹೊಸಬಾಂಬ್ ಸಿಡಿಸಿದ ರಮೇಶ್ ಜಾರಕಿಹೊಳಿ.

ಬೆಳಗಾವಿ, ಮೇ,7,2024 (www.justkannada.in):  ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸದ್ದು ಮಾಡುತ್ತಿರುವ ಈ ಬೆನ್ನಲ್ಲೆ ಇದೀಗ ಮಾಜಿ ಸಚಿವ ಹಾಗೂ ಶಾಸಕ ರಮೇಶ್ ಜಾರಕಿಹೊಳಿ ಹೊಸಬಾಂಬ್ ಸಿಡಿಸಿದ್ದಾರೆ.

ಮುಂದೆ ಸಿಎಂ ಸಿದ್ದರಾಮಯ್ಯ  ಮತ್ತು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಸಿಡಿ ಬರಬಹುದು ಎಂದು ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ.  ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ,  ಪ್ರಜ್ವಲ್​​​  ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿಯೋ ಸುತ್ತು ಹಾಕಿದೆ. ನನ್ನ ಪ್ರಕರಣದಲ್ಲಿ ಡಿಕೆ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ ಎಂದಿದ್ದಾರೆ.

ಮೊದಲಿನಿಂದ ಸಿಡಿ ಬಗ್ಗೆ ನಾನು ಹೇಳಿಕೊಂಡೇ ಬಂದಿದ್ದೆ. ಆಗ ಎಲ್ಲರೂ ನನ್ನ ಹೇಳಿಕೆ ನಿರ್ಲಕ್ಷ್ಯ ಮಾಡುತ್ತಾ ಬಂದರು. ಈಗ ಒಬ್ಬರಿಗೆ ಆಗಿದೆ, ಮುಂದೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ.ಪರಮೇಶ್ವರ್​​ ಅವರಿಗೂ ಬರಬಹುದು. ದಯವಿಟ್ಟು ಸಿಎಂ, ಗೃಹಸಚಿವರು ಇದಕ್ಕೆ ಇತಿಶ್ರೀ ಹಾಡಬೇಕು. ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇತಿಶ್ರೀ ಹಾಡಬೇಕು. ಸಿಎಂ ಅವರಿಗೆ ಕೈ ಮುಗಿದು ಕೇಳಿಕೊಳ್ತೇನೆ ಎಂದು ರಮೇಶ್ ಜಾರಕಿಹೊಳಿ  ಹೇಳಿದ್ದಾರೆ

ನನ್ನ ಕೇಸ್‌ನಲ್ಲಿ ಬರೀ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಿಲ್ಲ. ನಮ್ಮವರೂ ಕೇಸ್‌ ನಲ್ಲಿದ್ದಾರೆ, ಜೂ.4ರ ನಂತರ ಎಲ್ಲಾ ಬಹಿರಂಗಪಡಿಸುವೆ. ನನ್ನ ಪ್ರಕರಣದಲ್ಲಿ ಸತತ ನಾಲ್ಕು ವರ್ಷದಿಂದ ಪ್ರಶ್ನಾರ್ಥಕ ಚಿಹ್ನೆ ಇದೆ. ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Key words: Siddaramaiah, Parameshwar, CD, Ramesh Jarakiholi