ವಿಪಕ್ಷ ನಾಯಕರಾಗಲು ಸಿದ್ದರಾಮಯ್ಯ ಅಯೋಗ್ಯ- ಸಚಿವ ಕೆ.ಎಸ್‌.ಈಶ್ವರಪ್ಪ ಕಿಡಿ…

ಚಿತ್ರದುರ್ಗ,ನವೆಂಬರ್,6,2020(www.justkannada.in):  ಪ್ರಧಾನಿ ಮೋದಿ, ನಳೀನ್ ಕುಮಾರ್ ಕಟೀಲ್, ಸಿಎಂ ಬಿಎಸ್ ಯಡಿಯೂರಪ್ಪ ಬಗ್ಗೆ ಮಾತನಾಡುವ ಸಿದ್ಧರಾಮಯ್ಯ ವಿರೋಧ ಪಕ್ಷದ ನಾಯಕರಾಗಲು ಅಯೋಗ್ಯ ಎಂದು ಗ್ರಾಮ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ  ಲೇವಡಿ ಮಾಡಿದರು.jk-logo-justkannada-logo

ಚಿತ್ರದುರ್ಗದಲ್ಲಿಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಿಎಸ್ ವೈ, ನಳೀನ್‌ ಕುಮಾರ್‌ ಕಟೀಲ್‌ ಬಗ್ಗೆ ಮಾತನಾಡಿದರೆ ದೊಡ್ಡ ಮನುಷ್ಯನಾಗುತ್ತೇನೆ ಎಂಬ ಭ್ರಮೆಯಲ್ಲಿ  ಸಿದ್ದರಾಮಯ್ಯ ಇದ್ದಾರೆ. ಯಾರ ಬಗ್ಗೆ ಮಾತನಾಡಬೇಕು ಎಂಬುದು ಸಿದ್ದರಾಮಯ್ಯ ಅವರಿಗೆ ಇನ್ನೂ ಅರ್ಥವಾಗಿಲ್ಲ. ರಾಜ್ಯದ ಜನರು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಿದ ಬಳಿಕವೂ ಅವರಲ್ಲಿ ಬದಲಾವಣೆ ಕಂಡಿಲ್ಲ. ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲು ಕಂಡರೂ ಬುದ್ದಿ ಬಂದಿಲ್ಲ ಎಂದು ವ್ಯಂಗ್ಯವಾಡಿದರು.siddaramaiah-unworthy-become-opposition-leader-minister-ks-eshwarappa

ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲದಿದ್ದರೂ ಕಾಂಗ್ರೆಸ್‌ ನಾಯಕರು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿದ್ದಾರೆ. ನಾಯಕರಾಗಿ ಬಿಂಬಿಸಿಕೊಳ್ಳಲು ಇಬ್ಬರ ನಡುವೆ ಪೈಪೋಟಿ ನಡೆಯುತ್ತಿದೆ. ಮುಖ್ಯಮಂತ್ರಿಯಾಗುವ  ಹಗಲು ಕನಸು ಕಾಣುತ್ತಿದ್ದಾರೆ. ಆದು ಸಾಧ್ಯವಿಲ್ಲ ಎಂದು ಸಚಿವ ಈಶ್ವರಪ್ಪ  ಟಾಂಗ್ ನೀಡಿದರು.

Key words: Siddaramaiah -unworthy – become -opposition leader-Minister -KS Eshwarappa