ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಟ್ವಿಟರ್ ನಲ್ಲಿ ಬಿಜೆಪಿ ಧನ್ಯವಾದ ಅರ್ಪಿಸಿದ್ದು ಏಕೆ…?

ಬೆಂಗಳೂರು,ಅಕ್ಟೋಬರ್,22,2020(www.justkannada.in) : ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ಒಪ್ಪಿಕೊಂಡಿರುವುದಕ್ಕೆ ಬಿಜೆಪಿ ಟ್ವೀಟ್ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸಿದೆ.jk-logo-justkannada-logo

ಕೆಲವು ಗಂಟೆಗಳ ಹಿಂದೆ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕುರಿತು ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲ್ ನನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ ಎಂದು ಟ್ವೀಟ್ ಮಾಡಿದ್ದರು.

ಜೆಡಿಎಸ್ ನಲ್ಲಿ ಸಕಲ ಅಧಿಕಾರ ಭಾಗ್ಯ ಅನುಭವಿಸಿ, ನಾಮ ಹಾಕಿದ ಮಹಾನುಭಾವರು ನೀವೆ ಅಲ್ಲವೇ?

ಇದಕ್ಕೆ ಪ್ರತಿಯಾಗಿ ಬಿಜೆಪಿ ಟ್ವೀಟರ್ ಖಾತೆಯಿಂದ, ಕಾಂಗ್ರೆಸ್ ಸೇರುವುದಕ್ಕೂ ಮುನ್ನ ಮೊದಲು ಜೆಡಿಎಸ್ ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೆ ನಾಮ ಹಾಕಿದ ಮಹಾನುಭಾವರು ನೀವೆ ಅಲ್ಲವೇ? ಎಂದು ಪರ್ಶ್ನಿಸಿದ್ದು, ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವು ಒಪ್ಪಿಕೊಂಡಿರುವುದಕ್ಕೆ ಧನ್ಯವಾದ ಎಂದು ಟ್ವೀಟ್ ಮೂಲಕ ಟಾಂಗ್ ನೀಡಲಾಗಿದೆ.

Siddaramaiah,leader,opposition,tweeter,Why,BJP,thank,you ...?

key words : Siddaramaiah-leader-opposition-tweeter-Why-BJP-thank-you …?