Tuesday, September 15, 2026

BDA Apartments

ಸಿದ್ದರಾಮಯ್ಯ ಮುಂದಿನ ಸಿಎಂ ಹೇಳಿಕೆ ವಿಚಾರ: ಶಾಸಕ ಯತೀಂದ್ರ ಸಿದ್ಧರಾಮಯ್ಯ ಪ್...
Home Front Page ಸಿದ್ದರಾಮಯ್ಯ ಮುಂದಿನ ಸಿಎಂ ಹೇಳಿಕೆ ವಿಚಾರ: ಶಾಸಕ ಯತೀಂದ್ರ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ.

ಸಿದ್ದರಾಮಯ್ಯ ಮುಂದಿನ ಸಿಎಂ ಹೇಳಿಕೆ ವಿಚಾರ: ಶಾಸಕ ಯತೀಂದ್ರ ಸಿದ್ಧರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ.

ಮೈಸೂರು,ಜೂನ್,23,2021(www.justkannada.in):  ಮುಖ್ಯಮಂತ್ರಿ ಗಾದಿಗೆ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯಂತಿಂದ್ರ ಸಿದ್ದರಾಮಯ್ಯ  ಪ್ರತಿಕ್ರಿಯೆ ನೀಡಿದ್ದಾರೆ.jk

ತಿ. ನರಸೀಪುರದಲ್ಲಿ ಮಾತನಾಡಿದ ಶಾಸಕ ಯತಿಂದ್ರ ಸಿದ್ದರಾಮಯ್ಯ, ಈಗಾಗಲೇ ಸಿದ್ದರಾಮಯ್ಯ ನವರು ಸ್ಪಷ್ಟನೆ ನೀಡಿದ್ದಾರೆ. ಕೆಲವರು ತಮ್ಮ ವೈಯಕ್ತಿಕ ಅಭಿಪ್ರಾಯಗಳನ್ನ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ವೇದಿಕೆ ಮತ್ತು ಸಭೆಗಳಲ್ಲಿ ಈ ವಿಚಾರ ಹೇಳಿಲ್ಲ. ಕಾಂಗ್ರೆಸ್ ಪಕ್ಷ ಸಾಮೂಹಿಕ ನಾಯಕತ್ವದ ಮೇಲೆ ಚುನಾವಣೆ ಎದುರಿಸುತ್ತದೆ. ಈ ವಿಚಾರಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯ ತೊಂದರೆ ಬೀರಲ್ಲ ಎಂದರು.

Key words: Siddaramaiah’s -next CM –statement-MLA- Yatindra Siddaramaiah