ಜನತಾ ಜಲಧಾರೆಯ ಶೇ.50ರಷ್ಟು ಜನ ಸೇರಿಲ್ಲ: ನಮ್ಮ ಕಾರ್ಯಕ್ರಮದ ಮುಂದೆ ಸಿದ್ಧರಾಮೋತ್ಸವ ಏನು ಅಲ್ಲ- ಮಾಜಿ ಸಿಎಂ ಹೆಚ್.ಡಿಕೆ.

ಬೆಂಗಳೂರು,ಆಗಸ್ಟ್,3,2022(www.justkannada.in):  ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ 75ನೇ ವರ್ಷದ ಜನ್ಮದಿನ ಅಂಗವಾಗಿ ಇಂದು ದಾವಣಗೆರೆಯಲ್ಲಿ ಆಯೋಜಿಸಿದ್ಧ ಸಿದ್ಧರಾಮೋತ್ಸವ ಕಾರ್ಯಕ್ರಮದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಜನತಾ ಜಲಧಾರೆಯ ಶೇ.50 ರಷ್ಟು ಜನ ಸೇರಿಲ್ಲ.  ನಮ್ಮ ಕಾರ್ಯಕ್ರಮದ ಮುಂದೆ ಸಿದ್ಧರಾಮೋತ್ಸವ ಏನು ಅಲ್ಲ. 7 ಲಕ್ಷ, 8 ಲಕ್ಷ, 20 ಲಕ್ಷ ಅಂತಾರೆ. ಅದಕ್ಕೆ ಲೆಕ್ಕವೇ ಇಲ್ಲ. ಎಷ್ಟೇ ಆರ್ಭಟಿಸಿದರೂ  ನಮ್ಮ ಕಾರ್ಯಕ್ರಮಕ್ಕೆ ಸಾಟಿ ಇಲ್ಲ ಎಂದು ಹೇಳಿದರು.

ಸಿದ್ಧರಾಮೋತ್ಸವ ಕಾರ್ಯಕ್ರಮಕ್ಕೆ ಬರುವಾಗ ಕಾರ್ಯಕರ್ತರೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಕಾರ್ಯಕ್ರಮದಲ್ಲಿ ಒಂದು ಸಂತಾಪವೂ ಇಲ್ಲ. ಇದು ಕಾಂಗ್ರೆಸ್ ಕಾರ್ಯಕರ್ತರನ್ನ ಉಳಿಸಿಕೊಳ್ಳುವ ರೀತಿ ಎಂದು ಲೇವಡಿ ಮಾಡಿದರು.

ಇನ್ನು ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ರಾಜ್ಯ ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆಯಬೇಕು. ಮಳೆ ಹಾನಿ ಸೇರಿ ಹಲವು ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಿದೆ ಅಧಿವೇಶನ ಕರೆಯಬೇಕು ಎಂದು ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದರು.

Key words: Siddaramotsava- program-  Former CM- HD kumaraswamy