Friday, August 14, 2026

BDA Apartments

Home Front Page ಮಾಜಿ ಸಿಎಂ ಎಸ್. ಎಂ ಕೃಷ್ಣ ನಿವಾಸಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ….

ಮಾಜಿ ಸಿಎಂ ಎಸ್. ಎಂ ಕೃಷ್ಣ ನಿವಾಸಕ್ಕೆ ಹೆಚ್.ಡಿ ಕುಮಾರಸ್ವಾಮಿ ಭೇಟಿ….

ಬೆಂಗಳೂರು, ಜು,30,2019(www.justkannada.in):  ಎಸ್.ಎಂ.ಕೃಷ್ಣ ಅವರ ಅಳಿಯ ಕಾಫಿಡೆ ಸಂಸ್ಥಾಪಕ ಸಿದ್ಧಾರ್ಥ್  ನಿಗೂಢವಾಗಿ ನಾಪತ್ತೆಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ. ಈ ನಡುವೆ ವಿಚಾರ ತಿಳಿಯುತ್ತಿದ್ದಂತೆ ಗಣ್ಯರು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ  ಧೈರ್ಯ ತುಂಬಿದ್ದಾರೆ.

ಬೆಂಗಳೂರಿನ ಸದಾಶಿವನಗರದ ಸಿದ್ಧಾರ್ಥ ಅವರ ನಿವಾಸದಲ್ಲಿ ನೀರವಮೌನ ಆವರಿಸಿದೆ. ಈ ಮಧ್ಯೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಧೈರ್ಯ ಹೇಳಿದ್ದಾರೆ. ಹಾಗೆಯೇ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಸೇರಿ ಹಲವು ರಾಜಕೀಯ ಗಣ್ಯರು ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ಹೇಳಿದ್ದಾರೆ ಎನ್ನಲಾಗಿದೆ.

ಡಿಜಿಪಿ ನೀಲಮಣಿರಾಜು ಅವರು ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಗತ್ಯಬಿದ್ದರೆ ನೌಕಾಪಡೆಯ ಸಿಬ್ಬಂದಿಯ ನೆರವು ಪಡೆಯಿರಿ ಎಂದು ಯಡಿಯೂರಪ್ಪ ಅವರು  ಸೂಚಿಸಿದ್ದಾರೆ.

Key words: siddarth Former CM –SM Krishna-residence- visit-HD Kumaraswamy