ಲಾಕ್ ಡೌನ್ ಹಿನ್ನೆಲೆಯಲ್ಲಿ ಸೀಜ್ ಮಾಡಿದ್ದ ವಾಹನ ವಾಪಸ್ ನೀಡುವ ಪ್ರಕ್ರಿಯೆ ನಾಳೆಯಿಂದ

ಬೆಂಗಳೂರು, ಏಪ್ರಿಲ್ 30, 2020 (www.justkannada.in): ಲಾಕ್‌ಡೌನ್ ಅನ್ನು ಉಲ್ಲಂಘಿಸಿ ವಾಹನ ಚಲಾಯಿಸಿದ ಆರೋಪದಲ್ಲಿ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದ ವಾಹನಗಳನ್ನು ವಾಪಸ್ ನೀಡುವ ಪ್ರಕ್ರಿಯೆಗೆ ಮೇ 1ರಿಂದ ಚಾಲನೆ ನೀಡಲಾಗುತ್ತದೆ.

ಕೊರೋನ ಹಿನ್ನೆಲೆಯಲ್ಲಿ ಜಾರಿಗೊಳಿಸಿದ್ದ ಲಾಕ್ ಡೌನ್ ಉಲ್ಲಂಘಿಸಿದ್ದ  ಹಿನ್ನೆಲೆಯಲ್ಲಿ ಸಾವಿರಾರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಸೀಜ್ ಮಾಡಿದ್ದರು. ಈ ಎಲ್ಲ ವಾಹನಗಳನ್ನು ಮಾಲೀಕರಿಗೆ ನಾಳೆಯಿಂದ ಹಿಂದಿರುಗಿಸಲಾಗುತ್ತದೆ  ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಮೊದಲು ಮುಟ್ಟುಗೋಲು ಹಾಕಲಾಗಿದ್ದ ವಾಹನಗಳನ್ನು ಮೊದಲ ಆದ್ಯತೆಯ ಮೇಲೆ ದಾಖಲೆಪತ್ರಗಳನ್ನು ಪರಿಶೀಲಿಸಿ ವಾಪಸ್ ನೀಡಲಾಗುವುದು. ಮುಖ್ಯಮಂತ್ರಿ ಮತ್ತು ಗೃಹಸಚಿವರು ಇದಕ್ಕೆ ಅನುಮೋದನೆ ನೀಡಿದ್ದಾರೆ ಎಂದವರು ಟ್ವೀಟ್ ಮೂಲಕ ತಿಳಿಸಿದ್ದಾರೆ.