Tuesday, September 29, 2026

BDA Apartments

ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ BDA JK...
Home Front Page ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ

ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ: ಎಚ್.ಡಿ.ಕುಮಾರಸ್ವಾಮಿ

ಗೋಕಾಕ, ಡಿಸೆಂಬರ್ 01, 2019 (www.justkannada.in): ಡಿ.9ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಉಪ ಚುನಾವಣೆ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಮತದಾರರು ಕಿಂಗ್‌ ಮೇಕರ್‌ಗಳಾಗಲಿದ್ದಾರೆ. ನಾನು ಅಥವಾ ಜೆಡಿಎಸ್‌ ಅಲ್ಲ. ಡಿ.9ರವರೆಗೆ ಕಾದು ನೋಡಿ ನಂತರ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿದರು.

ಹನಿಟ್ರ್ಯಾಪ್‌ನ ಆಧಾರದ ಮೇಲೆ ಚುನಾವಣೆ ನಡೆಯುತ್ತಿಲ್ಲ. ನಾನು ಮಾಡಿದ ಜನಪರ ಕಾರ್ಯಕ್ರಮಗಳ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ. ನನ್ನ ಶಾಸಕರು ಯಾರಾದರೂ ಹನಿಟ್ರ್ಯಾಪ್ ಪ್ರಕರಣದಲ್ಲಿ ಇದ್ದರೆ, ಆಡಳಿತದಲ್ಲಿರುವ ಬಿಜೆಪಿಯವರು ಬಹಿರಂಗಪಡಿಸಲಿ ಎಂದು ಮಾಜಿ ಸಿಎಂ ಸವಾಲು ಹಾಕಿದರು.