Thursday, September 24, 2026

BDA Apartments

Home Front Page ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ- ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ.

ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ- ನಳೀನ್ ಕುಮಾರ್ ಕಟೀಲ್ ಸ್ಪಷ್ಟನೆ.

ಬೆಂಗಳೂರು,ನವೆಂಬರ್,29,2022(www.justkannada.in): ರೌಡಿಶೀಟರ್ ಆಗಿದ್ದ ಸೈಲೆಂಟ್ ಸುನೀಲ ಬಿಜೆಪಿ ನಾಯಕರ ಜೊತೆ  ವೇದಿಕೆಯಲ್ಲಿ ಕಾಣಿಸಿಕೊಂಡ ವಿಚಾರ ಭಾರಿ ಸದ್ದು ಮಾಡಿದ್ದು ವಿಪಕ್ಷಗಳು ಬಿಜೆಪಿಯನ್ನ ಟೀಕಿಸಿದ್ದವು.

ಈ ಸಂಬಂಧ ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್,  ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ.  ಯಾವುದೇ ಕಾರಣಕ್ಖೂ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಈ ರೀತಿ ಘಟನೆ ನಡೆಯದಂತೆ  ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನ ಪಕ್ಷದ ಗಮನಕ್ಕೆ ತರಬೇಕು.  ಉಗ್ರರು ಭಯೋತ್ಪಾದನೆಗೆ ಬೆಂಬಲ ಕೊಡುವವರು ಹಾಗೂ ಅಪರಾಧ ಹಿನ್ನೆಲೆ ಉಳ್ಳವರನ್ನ ಬಿಜೆಪಿ ಸಹಿಸಲ್ಲ  ಎಂದು ತಿಳಿಸಿದ್ದಾರೆ.ಸೈಲೆಂಟ್ ಸುನೀಲ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ- ನಳೀನ್ ಕುಮಾರ್ ಕಟೀಲ್ ಸ್ಪ...

 

 

ಹಾಗೆಯೇ ಸೈಲೆಂಟ್ ಸುನೀಲನ ಕಾರ್ಯಕ್ರಮದಲ್ಲಿದ್ದವರಿಂದ ವಿವರಣೆ ಕೇಳಲಾಗುವುದು ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

Key words: Silent Sunil – not -allowed – join- BJP-Naleen Kumar Kateel.