ಒಂದು ದಿನ ಮಾತ್ರ ಸರಳ ಹಂಪಿ ಉತ್ಸವ ಆಚರಣೆ-ಸಚಿವ ಆನಂದ್ ಸಿಂಗ್…

ಬಳ್ಳಾರಿ,ಅಕ್ಟೋಬರ್,17,2020(www.justkannada.in):  ಕೊರೋನಾ ಹಿನ್ನೆಲೆ ಈ ಬಾರಿ ಸರಳವಾಗಿ ಒಂದು ದಿನ ಮಾತ್ರ ಹಂಪಿ ಉತ್ಸವ ಆಚರಣೆ ಮಾಡಲಾಗುತ್ತದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.jk-logo-justkannada-logo

ಬಳ್ಳಾರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆನಂದ್ ಸಿಂಗ್ ಕೊರೋನಾ ಹಿನ್ನೆಲೆ ಈ ಬಾರಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ನವೆಂಬರ್ 5ರವರೆಗೆ ನೀತಿಸಂಹಿತೆ ಜಾರಿ ಇದೆ. ನೀತಿ ಸಂಹಿತೆ ಮುಗಿದ ನಂತರ ಹಂಪಿ ಸ್ವಾಮೀಜಿಗಳ ಜತೆ ಮಾತನಾಡಿ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದರು.simple-hampi-festival-celebration-one-day-minister-anand-singh

ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ಉತ್ಸವಗಳನ್ನು ಸರಳವಾಗಿ ಆಚರಿಸಲಾಗಿತ್ತಿದೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಕವಾಗಿ ಆಚರಣೆಗೆ ಸರ್ಕಾರ ಮುಂದಾಗಿದೆ. ಈ ಮಧ್ಯೆ ಹಂಪಿ ಉತ್ಸವವನ್ನೂ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸುವುದಾಗಿ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

Key words: simple -Hampi festival -celebration -one day-Minister -Anand Singh.