ಖ್ಯಾತ ಗಾಯಕ ಎಸ್.ಪಿಬಿ ಆರೋಗ್ಯ ಸ್ಥಿತಿ ಗಂಭೀರ:  ಆಸ್ಪತ್ರೆಗೆ ಕುಟುಂಬಸ್ಥರ ಭೇಟಿ…

ಚೆನ್ನೈ,ಸೆಪ್ಟಂಬರ್,25,2020(www.justkannada.in):  ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.jk-logo-justkannada-logo

ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯ ಅವರಿಗೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ ಅವರ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಎಸ್ ಬಿಪಿ ಅವರ ಪುತ್ರಿ ಪಲ್ಲವಿ, ಸಹೋದರಿ ಶೈಲಜಾ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.singer-sp-balasubramanyam-health-condition-serious-chennai

ಇನ್ನು ಆಸ್ಪತ್ರೆಗೆ ನಿರ್ದೇಶಕ ಭಾರತಿರಾಜಾ ಅವರು ಭೇಟಿ ನೀಡಿದ್ದು, ಆಸ್ಪತ್ರೆಯ ವೈದ್ಯರ ಜತೆ ಎಸ್ ಪಿಬಿ ಪುತ್ರ ಚರಣ್ ಅವರು ಮಾತುಕತೆ ನಡೆಸುತ್ತಿದ್ದಾರೆ. ಇನ್ನು ಆಸ್ಪತ್ರೆಯ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.  ಕೆಲವೇ ಕ್ಷಣಗಳಲ್ಲಿ ಎಸ್ ಪಿಬಿ ಅವರ ಆರೋಗ್ಯ ಸ್ಥಿತಿ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆಯಾಗುವ ಸಾಧ್ಯತೆ ಇದೆ.

Key words:  singer -SP Balasubramanyam-  health condition – serious-chennai