ಹಿನ್ನೆಲೆ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ…

ಬೆಂಗಳೂರು,ಫೆ,29,2020(www.justkannada.in) ಹಿನ್ನೆಲೆ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿನಗರ ಠಾಣಾ ಪೊಲೀಸರು  ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಸುಶ್ಮಿತಾ ಪತಿ ಶರತ್ ಕುಮಾರ್, ದೊಡ್ಡಮ್ಮ ವೈದೇಹಿ ಹಾಗೂ ಸಹೋದರಿ ಗೀತಾ ಬಂಧಿತ ಆರೋಪಿಗಳು. ಹಿನ್ನೆಲೆ ಗಾಯಕಿ ಸುಸ್ಮಿತಾ ಅವರು  ಫೆ.16ರ ರಾತ್ರಿ ಮಾಳಗಾಳದಲ್ಲಿರುವ ತಾಯಿಯ ಮನೆಯಲ್ಲಿ  ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ತನ್ನ ಸಾವಿಗೆ ಪತಿ, ಆತನ‌ ದೊಡ್ಡಮ್ಮ ಹಾಗೂ ಸಹೋದರಿಯೇ ಕಾರಣ. ಮೂವರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ನೋಟ್​ನಲ್ಲಿ ಬರೆದಿದ್ದರು.

ಈ ಕುರಿತು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಪಾಂಡವಪುರದ ಸಂಬಂಧಿಕರ ಮನೆಯಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: singer- Sushmita –suicide-case-Arrest -three accused