ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರ : ಎಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು,ಅಕ್ಟೋಬರ್,19,2020(www.justkannada.in)  : ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಸಿಎಂ ಪುತ್ರ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಪಾಪದ ಹಣ  ತಗೊಂಡು ಹೋಗಿ ಶಿರಾದಲ್ಲಿ ಕುಳಿತಿದ್ದೀರಲ್ಲ. ಅದೇ ದುಡ್ಡನ್ನು ತಗೊಂಡು ಹೋಗಿ ಬೀದಿಯಲ್ಲಿ ಇರುವ ಜನರಿಗೆ ಕೊಡಬೇಕಿತ್ತು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.jk-logo-justkannada-logo

ಸಿಎಂ ಪುತ್ರ ವಿಜಯೇಂದ್ರ ಕೆಆರ್ ಪೇಟೆಯಂತೆ ಶಿರಾ ಮುಗಿಸ್ತೀನಿ ಅಂತಾ ಹೇಳಿರುವುದಕ್ಕೆ ಎಚ್.ಡಿ.ಕುಮಾರಸ್ವಾಮಿ ಅಕ್ರೋಶವ್ಯಕ್ತಪಡಿಸಿದ್ದಾರೆ.

ಶಿರಾದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಯುವಕರಿಗೆ ಕುಡಿಸಿ, ರಸ್ತೆಯಲ್ಲೇ ಮಲಗಿಸಿದ್ದಾರೆ. ಇದು ಮಾಧ್ಯಮಗಳಲ್ಲೇ ಬಂದಿದೆ. ಉತ್ತರ ಕರ್ನಾಟಕ ಭಾಗಕ್ಕೆ ಅವರ ಕಷ್ಟ ಸುಖ ಕೇಳಲು ಕನಿಷ್ಠ ಸೌಜನ್ಯಕ್ಕಾದ್ರು ಹೋಗಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ನನಗೆ ಇಷ್ಟೆಲ್ಲಾ ನೋವು ಇದ್ರು, ಉತ್ತರ ಕರ್ನಾಟಕ ಭಾಗದಲ್ಲಿ. ಜನರು ನನ್ನನ್ನು ಕೈ ಬಿಟ್ಟಿದ್ರು.  ಆ ಭಾಗದ ಜನರ ಕಷ್ಟಗಳಿಗೆ ನಾನು ಸ್ಪಂದಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

key words : sin-money-gone-you-sitting-Shira-HD Kumaraswamy-spark