ರಾಜ್ಯದಲ್ಲಿರುವ ಕಾಂಗ್ರೆಸ್ ನ ಕತ್ತೆಗಳು SIR ಪ್ರಕ್ರಿಯೆ ಹಾಳು ಮಾಡ್ತಿವೆ- ಬಿವೈ ವಿಜಯೇಂದ್ರ ತಿರುಗೇಟು

ಬೆಂಗಳೂರು,ಜುಲೈ,4,2026 (www.justkannada.in): ಎಸ್ ಐಆರ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುವಾಗ ಚುನಾವಣಾ ಆಯೋಗ ಏನ್ ಕತ್ತೆ ಕಾಯುತ್ತಿದೆಯಾ? ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಕೇಂದ್ರ ಚುನಾವಣಾ ಆಯೋಗ  ತನ್ನ ಕೆಲಸವನ್ನು ಸರಿಯ಻ಗಿ ಮಾಡುತ್ತಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಕತ್ತೆಗಳು ಎಸ್ ಐಆರ್ ಪ್ರಕ್ರಿಯೆಯನ್ನು ಹಾಳು ಮಾಡುತ್ತಿವೆ.  ರಾಜ್ಯದ ಕಾಂಗ್ರೆಸ್ ನ ಕತ್ತೆಗಳು ಎಸ್ ಐಆರ್ ಪ್ರಕ್ರಿಯೆ ಅತಂತ್ರ ಮಾಡುತ್ತಿವೆ. ಹೀಗಾಗಿ  ಕೇಂದ್ರ ಚುನಾವಣಾ ಆಯೋಗ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಟಾಂಗ್ ಕೊಟ್ಟರು.

ಕರ್ನಾಟಕದಲ್ಲಿ ಎಸ್‌ಐಆರ್ ಲೋಪ ಎಂಬ ವಿಪಕ್ಷಗಳ ಆರೋಪದ ಕುರಿತು ಮಾತನಾಡಿದ್ದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗ ಕತ್ತೆ ಕಾಯ್ತಾ ಇದೆಯಾ? ಅವರದ್ದೇ ತಾನೆ ಜವಾಬ್ದಾರಿ ಎಂದಿದ್ದರು.

Key words: SIR, BY Vijayendra, Minister, Priyank kharge