Friday, September 18, 2026

BDA Apartments

SIR BDA JK_Adv BDA Adv
Home Front Page SIR: ಸ್ವೀಪ್ ಚಟುವಟಿಕೆಗೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ CEO ಎಸ್.ಯುಕೇಶ್ ಕುಮಾರ್

SIR: ಸ್ವೀಪ್ ಚಟುವಟಿಕೆಗೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ CEO ಎಸ್.ಯುಕೇಶ್ ಕುಮಾರ್

ಮೈಸೂರು,ಸೆಪ್ಟಂಬರ್,18,2026 (www.justkannada.in):  ತಾಲ್ಲೂಕಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ವತಿಯಿಂದ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಶುಕ್ರವಾರ ಚಾಮುಂಡಿಬೆಟ್ಟದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಅವರ ನೇತೃತ್ವದಲ್ಲಿ ಸ್ವೀಪ್ ಚಟುವಟಿಕೆ ಜರುಗಿತು.

ಎಸ್ ಐಆರ್ ಭಾಗವಾಗಿ ನಾಗರಿಕರು ತಮ್ಮ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಆಕ್ಷೇಪಣೆ ಹಾಗೂ ತಿದ್ದುಪಡಿ ಮಾಡಿಸಲು ಸೆ.19 ಮತ್ತು 20 ರಂದು ನಡೆಯುವ “ಸಾರ್ವಜನಿಕ ವಿಶೇಷ ಅಭಿಯಾನ” ಸಂಬಂಧಿಸಿದ ಭಿತ್ತಿಪತ್ರ ಬಿಡುಗಡೆಗೊಳಿಸಿದ ಅವರು, ಹಸ್ತಾಕ್ಷರ ಸಂಗ್ರಹಣಾ ಅಭಿಯಾನ ಹಾಗೂ ಜಾಗೃತಿ ಜಾಥಾಗೆ ಚಾಲನೆ ನೀಡಿದರು.

ಈ ವೇಳೆ ತಹಶಿಲ್ದಾರ್ ಮಹೇಶ್ ಕುಮಾರ್ ಅವರು ಮಾತನಾಡಿ, ಅರ್ಹ ನಾಗರಿಕರ ಹೆಸರನ್ನು ಸೇರಿಸಲು ಮತ್ತು ದೋಷರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಎಸ್ ಐಆರ್ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ, ತಮ್ಮ ಹೆಸರನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳಿದ್ದರೆ ಮಾಡಿಸಿಕೊಳ್ಳಬಹುದು ಎಂದರು.

ನಿಗದಿತ ಸಮೂನೆ ಪಡೆದು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಪಟ್ಟಿಯಿಂದ ಹೆಸರು ತೆಗೆದುಹಾಕಲು ಹಾಗೂ ಮತದಾರರ ಚೀಟಿಯಲ್ಲಿನ ತಿದ್ದುಪಡಿಗಳು ಮತ್ತು ವಿಳಾಸ ಬದಲಾವಣೆಗೆ ಮಾಡಬಹುದು ಎಂದರು.

ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ಅದರ ಭಾಗವಾಗಿ ಇದೇ ಶನಿವಾರ ಮತ್ತು ಭಾನುವಾರ ವಿಶೇಷ ಅಭಿಯಾನ ನಡೆಯಲಿದೆ ಎಂದು ತಿಳಿಸಿದರು.SIR ceo yukesh

ಈ ಅಭಿಯಾನದ ಅಂಗವಾಗಿ ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಿದ್ದು, ನಾಗರಿಕರು ಆಕ್ಷೇಪಣೆಗಳ ಅರ್ಜಿಗಳನ್ನು ಸಲ್ಲಿಸಬಹುದು. 18 ವರ್ಷ ತುಂಬಿದ ಅರ್ಹ ಯುವ ಮತದಾರರು ಕೂಡ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಬಹುದು ಎಂದು ಮಾಹಿತಿ ನೀಡಿದರು.District Panchayat ceo yukesh1

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಭೀಮಪ್ಪ ಕೆ.ಲಾಳಿ ಅವರು, ಸಿಡಿಪಿಒ ವೆಂಕಟಪ್ಪ ಅವರು, ಗ್ರಾ.ಪಂ.ಆಡಳಿತಾಧಿಕಾರಿ ವೈ.ಎನ್.ಮಮತಾ ಅವರು, ತಾ.ಪಂ. ಸಹಾಯಕ ನಿರ್ದೇಶಕ ಕೆ.ರುಕ್ಮಾಂಗದ ಅವರು ಸೇರಿದಂತೆ ತಾಲ್ಲೂಕಿನ ಎಲ್ಲಾ ಪಿಡಿಒಗಳು, ಎನ್.ಆರ್.ಎಲ್.ಎಂ ಸಿಬ್ಬಂದಿ, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಮತಗಟ್ಟೆ ಅಧಿಕಾರಿಗಳು, ಪಶುಸಖಿ, ಕೃಷಿಸಖಿ, ಟಿ.ಎಸ್.ಸುಬ್ಬಣ್ಣ ಸಾರ್ವಜನಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.CEO jk02_new jk02 new

 

English Summary
Title

S. Ukesh Kumar IAS: Driving Mysuru SVEEP Voter Awareness Campaigns

Short Description
S. Ukesh Kumar, IAS, serves as the Chief Executive Officer (CEO) of the Mysuru Zilla Panchayat and heads the District SVEEP (Systematic Voters' Education and Electoral Participation) Committee. As the nodal officer, he spearheads critical voter awareness campaigns across the Mysore district. His initiatives focus on boosting electoral turnout, conducting voter registration drives for youth, and promoting ethical voting. Under his leadership, the Mysuru District Panchayat implements institutional drives and literacy camps to ensure inclusive democratic participation.
Keywords
SIR, District Panchayat, CEO, S. Yukesh Kumar, launches, SVEEP activity.