ಮೈಸೂರಿನಲ್ಲಿ SIR ಪ್ರಕ್ರಿಯೆ: ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು

ಮೈಸೂರು,ಜುಲೈ,1,2026 (www.justkannada.in): ಮೈಸೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.

ಈ ಸಂಬಂಧ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಪ್ರಸ್ತುತ ಹಂತದ ಗಣಿಕೆ ನಮೂನೆ (Enumeration Form – EF)ಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಹಾಗೂ ಮತದಾರರ ನೋಂದಣಾಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

217-ಚಾಮರಾಜ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 06 ಗೋಕುಲಂ – ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಗಣಿಕೆ ನಮೂನೆ (Enumeration Form – EF)ಗಳನ್ನು ವಿತರಣೆ ಮಾಡುತ್ತಿರುವ ಕಾರ್ಯದ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಮೈಸೂರು ಮಹಾನಗರಪಾಲಿಕೆಯ ಉಪ ಆಯುಕ್ತರು, ವಲಯ ಆಯುಕ್ತರು, ಕಂದಾಯ ಸಿಬ್ಬಂದಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Key words: SIR, process, Mysore, Officials, inspection