Tuesday, September 1, 2026

BDA Apartments

Home Crime ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ SIT

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ SIT

ಬೆಂಗಳೂರು,ಆಗಸ್ಟ್,1,2024 (www.justkannada.in): ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ನಗರ ಮೂಲದ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್,ಡಿ ರೇವಣ್ಣ ವಿರುದ್ದ ಎಸ್ ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ ಎಸ್ ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.  ರೇವಣ್ಣ ಸೂಚನೆ ಮೇರೆಗೆ ಮಹಿಳೆ ಅಪಹರಣ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಹಾಗೆಯೇ ಪ್ರಕರಣದಲ್ಲಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಪಾತ್ರವೂ ಇದೆ ಎಂದು ಉಲ್ಲೇಖಿಸಲಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು  ಕಿಡ್ನಾಪ್ ಮಾಡಿದ ಆರೋಪದ ಮೇಲೆ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಜಿ ಸಚಿವ ಹೆಚ್. ಡಿ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದರು. ಹೆಚ್.ಡಿ ರೇವಣ್ಣ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.

Key words: SIT, charge sheet, against, HD Revanna