Thursday, August 13, 2026

BDA Apartments

Home Front Page ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನ ಮನೆ ಮೇಲೆ ಎಸ್ ಐಟಿ ದಾಳಿ, ಪರಿಶೀಲನೆ

ಜಾತಿ ನಿಂದನೆ, ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನ ಮನೆ ಮೇಲೆ ಎಸ್ ಐಟಿ ದಾಳಿ, ಪರಿಶೀಲನೆ

ಬೆಂಗಳೂರು, ಸೆಪ್ಟೆಂಬರ್ 28,2024 (www.justkannada.in): ಗುತ್ತಿಗೆದಾರನಿಗೆ ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ ಪ್ರಕರಣ ಮತ್ತು ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್​ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಸದ್ಯ ಮೂರು ಕೇಸ್​ಗಳ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವೈಯಾಲಿಕಾವಲ್ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಎಫ್​ಎಸ್​​ಎಲ್ ತಂಡದ ಜತೆಗೆ ಎಸ್​ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Key words:  SIT, raids, MLA Munirathna, house