ಹಾಸನ,ಮೇ,14,2024 (www.justkannada.in): ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಇದೀಗ ಹಾಸನದ ಎರಡು ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೋಟೆಲ್, ಬಾರ್ ಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಶ್ರೀಕೃಷ್ಣ ಹೋಟೆಲ್ ಮೇಲೆ ಎಸ್ಐ ಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: SIT, raids, Preethamgowda, friend






