Friday, August 21, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ- ಮಾಜಿ ಸಿಎಂ ಬಿಎಸ್ ವೈ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತೆ- ಮಾಜಿ ಸಿಎಂ ಬಿಎಸ್ ವೈ

ಶಿವಮೊಗ್ಗ,ಸೆಪ್ಟಂಬರ್,4,2024 (www.justkannada.in):   ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಬರುತ್ತದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ,  ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣಗಳು ಸಾಬೀತು ಆಗುತ್ತಿವೆ. 100% ಸಿದ್ದರಾಮಯ್ಯ ರಾಜೀನಾಮೇ ನೀಡುವ ಪರಿಸ್ಥಿತಿ ಬರುತ್ತದೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ.  ಇದಕ್ಕೂ ಮೊದಲು ಸಿಎಂ ಗೌರವಯುತವಾಗಿ ರಾಜೀನಾಮೆ ನೀಡಲಿ ಎಂದರು.

ಕೋವಿಡ್ ಹಗರಣದ ವರದಿ ಸಲ್ಲಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ವೈ, ರಾಜ್ಯ ರಾಜಕಾರಣದಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಆಗಲಿದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸ್ವತಂತ್ರವಿದೆ. ನಾವು ಯಾವುದೇ ಹೋರಾಟ ಮಾಡಲ್ಲ ಎಂದರು.

Key words: situation, CM Siddaramaiah, resign, Former CM, BSY