Sunday, September 13, 2026

BDA Apartments

ಬಾವಿಗೆ ಹಾರಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣು BDA JK_Adv BDA Adv
Home Crime ಬಾವಿಗೆ ಹಾರಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣು.

ಬಾವಿಗೆ ಹಾರಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣು.

ಯಾದಗಿರಿ,ಜೂನ್, 28,2021(www.justkannada.in): ಬಾವಿಗೆ ಹಾರಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.jk

ಯಾದಗಿರಿ ಜಿಲ್ಲೆ ಶಹಪುರ ತಾಲ್ಲೂಕು  ದೋರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನಾಲ್ಕು ಮಕ್ಕಳ ಜತೆ ಪತಿ, ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪತಿ ಭೀಮರಾಯ ಸುರಪುರ (45), ಪತ್ನಿ ಶಾಂತಮ್ಮ (36), ಮಕ್ಕಳಾದ ಸುಮಿತ್ರಾ (12), ಶ್ರೀದೇವಿ (12), ಲಕ್ಷ್ಮಿ (8), ಶಿವರಾಜ್‌ (9) ಆತ್ಮಹತ್ಯೆಗೆ ಶರಣಾದವರು ಎಂದು ಗುರುತಿಸಲಾಗಿದೆ.

ಸಾಲಬಾಧೆ ತಾಳಲಾರದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನುಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ಶವಕಾಗಿ ಹುಡುಕಾಟ ನಡೆದಿದೆ.

Key words: Six members -same family- commit -suicide -yadgir