ಸಾಹಿತಿ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಿಸಿ- ಬಿ.ವೈ ವಿಜಯೇಂದ್ರ ಒತ್ತಾಯ

ಬೆಂಗಳೂರು,ಸೆಪ್ಟಂಬರ್,25,2025 (www.justkannada.in):  ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕವನ್ನ ನಿರ್ಮಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒತ್ತಾಯಿಸಿದ್ದಾರೆ.

ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿವೈ ವಿಜಯೇಂದ್ರ ಅವರು  ಸಾಹಿತಿ ಎಸ್.ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿದ ಅವರು, ಕನ್ನಡ ನಾಡಿನ ಸಾಕ್ಷಿ ಪ್ರಜ್ಞೆ, ಅದ್ವಿತೀಯ ಸಾಹಿತಿ, ಸರಸ್ವತಿ ಸುಪುತ್ರ, ಡಾ.ಎಸ್.ಎಲ್ ಭೈರಪ್ಪನವರ ಪಾರ್ಥಿವ ಶರೀರದ ದರ್ಶನ ಪಡೆದು ಗೌರವಪೂರ್ವಕ ಅಂತಿಮ ನಮನಗಳನ್ನು ಸಲ್ಲಿಸಲಾಯಿತು. ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿ ಸಾಹಿತ್ಯ, ಸಂಸ್ಕೃತಿ ಹಾಗೂ ಭಾರತೀಯತೆಯ ಮಹತ್ವದ ಕೊಂಡಿಯಾಗಿದ್ದ ಎಸ್.ಎಲ್ ಭೈರಪ್ಪ ನವರು ಸಾಹಿತ್ಯ ಲೋಕದ ಇತಿಹಾಸದಲ್ಲಿ ಹಾಗೂ ಕೋಟಿ ಕೋಟಿ ಸಾಹಿತ್ಯ ಅಭಿಮಾನಿಗಳಲ್ಲಿ ಶಾಶ್ವತ ನೆನಪಾಗಿ ಉಳಿಯಲಿದ್ದಾರೆ, ಅವರ ಆತ್ಮಕ್ಕೆ ಚಿರಶಾಂತಿ ಕೋರುವೆ ಎಂದರು.

ಭೈರಪ್ಪ ಅವರು ಬಹಳ ಸರಳವಾಗಿ ತಮ್ಮ ಜೀವನ ನಡೆಸಿದರು. ಹಲವು ಪ್ರಶಸ್ತಿಗಳು ಎಸ್ ಎಲ್ ಭೈರಪ್ಪ ಅವರನ್ನ ಹುಡುಕಿಕೊಂಡು ಬಂದಿವೆ. ಮೈಸೂರಿನಲ್ಲಿ ಅಥವಾ ಬೆಂಗಳೂರಿನಲ್ಲಿ ಎಸ್ ಎಲ್ ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸುತ್ತೇನೆ ಎಂದರು.

Key words: construction, writer, SL Bhyrappa, memorial, BY Vijayendra,