ಧರ್ಮಸ್ಥಳ,ಆಗಸ್ಟ್,21,2025 (www.justkannada.in): ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ನಾಲ್ವರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಯೂಟ್ಯೂಬರ್ ಸಮೀರ್ ಹಾಗೂ ಸುಜಾತಾ ಭಟ್ ವಿರುದ್ದ ಸ್ನೇಹಮಯಿ ಕೃಷ್ಣ ಧರ್ಮಸ್ಥಳ ಠಾಣೆಗೆ ಆಗಮಿಸಿ ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದೂರು ಸ್ವೀಕರಿಸಿರುವುದಾಗಿ ಧರ್ಮಸ್ಥಳ ಪೊಲೀಸರು ಹಿಂಬರಹ ಕೊಟ್ಟಿದ್ದಾರೆ. ಸುಳ್ಳು ದೂರು ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ನಾಲ್ವರೂ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಅವರನ್ನ ಬಂಧಿಸಿ ಎಂದು ಮನವಿ ಮಾಡಿದ್ದಾರೆ.
Key words: Snehamayi Krishna, complaint, Dharmasthala