ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಆನ್ಲೈನ್ ಮೂಲಕ ಪಾಲ್ಗೊಳ್ಳಲು ನ. 30 ವರೆಗೆ ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ, ನವೆಂಬರ್, 20,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಸ್ವಯಂ ಘೋಷಣೆ ಮಾಡಿಕೊಳ್ಳಲು ನವೆಂಬರ್ 30 ವರೆಗೆ ಅವಧಿ ವಿಸ್ತರಿಸಲಾಗಿದೆ.

ಜಿಲ್ಲೆಯ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಹಿತದೃಷ್ಟಿಯಿಂದ ಆನ್ಲೈನ್ ಮೂಲಕ ಅವಧಿ ವಿಸ್ತರಿಸಲಾಗಿದ್ದು ಸಮೀಕ್ಷೆಯಿಂದ ಹೊರಗುಳಿದಿರುವವರು https://kscbcselfdeclaration.karnataka.gov.in ವೆಬ್ಸೈಟ್ ನಲ್ಲಿ ತಮ್ಮ ವಿವರವನ್ನು ನಮೂದಿಸಲು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಜಿಲ್ಲೆಯ ನಾಗರೀಕರು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: online, participation, social, educational, survey, extended