Tuesday, September 29, 2026

BDA Apartments

ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ -ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು BDA ...
Home Front Page ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ -ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು

ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ -ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು

ಮೈಸೂರು,ಡಿಸೆಂಬರ್,9,2024 (www.justkannada.in):  ಮೈಸೂರು ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಸರ್ಕಾರದ ವತಿಯಿಂದ  ಮಾಸಿಕ ಸಹಾಯಧನವನ್ನು ನೀಡುವ ಬಗ್ಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಗಳು  ಸಂಬಂಧಿಸಿದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರ ಸಂದರ್ಶನ ನಡೆಸಿ ಆಯ್ಕೆ ಮಾಡಿದರು.

ಈ ವೇಳೆ ಮಾತನಾಡಿದ ಅವರು,  “ತಾವುಗಳೆಲ್ಲರೂ ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸಿ ಸಮಾಜಕ್ಕೆ ನಿಮ್ಮದೇ ರೀತಿಯಲ್ಲಿ ಕೊಡುಗೆಯನ್ನು ನೀಡಬೇಕು” ಎಂದು ಸಲಹೆ ನೀಡಿದರು.

ಸಭೆಯಲ್ಲಿ  ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಂಗೇಗೌಡ ಹಾಗೂ ಅರ್ಜಿ‌ಸಲ್ಲಿಸಿದ್ದ ಜಿಲ್ಲೆಯ ಅರ್ಹ  ಕಾನೂನು ಪದವೀಧರರು ಹಾಜರಿದ್ದರು.

Key words: socially, responsible, manner –Mysore, ADC, Dr. P. Shivaraju