ಮುಂದುವರೆದ ಶಾಸಕ ಸಾ.ರಾ.ಮಹೇಶ್ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಟಾಪಟಿ”

ಮೈಸೂರು,ಜನವರಿ,14,2021(www.justkannada.in) : ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ತೋರಿಸಿಕೊಳ್ಳಲು ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ವರ್ತನೆಗೆ ಶಾಸಕ ಸಾ.ರಾ.ಮಹೇಶ್ ಅಸಮಾಧಾನ ಹೊರಹಾಕಿದ್ದಾರೆ.jk-logo-justkannada-mysore

ಸಾರಾ ಮಹೇಶ್ ಹಾಗೂ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಜಟಾಪಟಿ ಮುಂದುವರೆದಿದೆ. ವಚನದ ಮೂಲಕ ಜಿಲ್ಲಾಧಿಕಾರಿಗೆ ಸಾರಾ ಟಾಂಗ್ ನೀಡಿದ್ದಾರೆ. ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ತಮ್ಮ ದಿಢೀರ್ ವರ್ಗಾವಣೆಗೆ ನ್ಯಾಯ ಕೇಳಲು ಕೆಎಟಿಗೆ ಹೋಗಿದ್ದವರು ಇಂದು ಮೈಸೂರಿನಲ್ಲಿ ಉಲ್ಟಾ ಹೊಡೆದೆ ಕಥೆ ಇಡೀ ನಾಡಿಗೆ ಗೊತ್ತಿದೆ. ಇಂಥವರಿಂದ ನಾನು ಪಾಠ ಕಲಿಯಬೇಕಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

Social,Website,Sa.ra.Mahesh,District,Collector,Rohini Sindhuri

ತನಗೊಂದು ನ್ಯಾಯ, ಪರರಿಗೊಂದು ನ್ಯಾಯ ಎನ್ನುವ ಇಂತಹ ಅಧಿಕಾರಿಗಳು ಶಿಷ್ಟಾಚಾರಗಳ ಕುರಿತ ಸರ್ಕಾರದ ಸುತ್ತೋಲೆಗಳನ್ನು ಓದಿ ಮೊದಲು ಅರ್ಥಮಾಡಿಕೊಳ್ಳಲಿ. ಮಂಗಳವಾರ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಭೆಯಿಂದ ಹೊರನಡೆದಿದ್ದಕ್ಕೆ ಟ್ವಿಟರ್ ನಲ್ಲಿ ಶಾಸಕ ಸಾ.ರಾ.ಮಹೇಶ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

key words : Social-Website-Sa.ra.Mahesh-District-Collector-Rohini Sindhuri