Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಬಿಎಸ್ವೈ

ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ: ಹೊಸ ಬಾಂಬ್ ಸಿಡಿಸಿದ ಬಿಎಸ್ವೈ

ಬೆಂಗಳೂರು, ಸೆಪ್ಟೆಂಬರ್ 19, 2021 (www.justkannada.in): ವಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ, ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಪ್ರತಿಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ಹೆಣೆದಿವೆ. ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

ಈಗಾಗಲೇ ಬಿಜೆಪಿಯ ಕೆಲ ನಾಯಕರನ್ನು ಕಾಂಗ್ರೆಸ್ ನಾಯಕರು ಸಂಪರ್ಕಿಸಿದ್ದಾರೆ. ಹಾಗಾಗಿ ಯಾರನ್ನೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಹೇಳಿದರು.

ಈಗಿನಿಂದಲೇ ಪ್ರವಾಸಗಳನ್ನು ಕೈಗೊಂಡು ಚುನಾವಣೆಗೆ ಸಿದ್ಧರಾಗಬೇಕು. 150 ಸ್ಥಾನಗಳನ್ನು ಪ್ರಾಮಾಣಿಕವಾಗಿ ಗೆಲ್ಲಬೇಕು. ಪಕ್ಷದ ಕಾರ್ಯಕರ್ತರು ಇದಕ್ಕಾಗಿ ದುಡಿಯಬೇಕು ಎಂದು ತಿಳಿಸಿದ್ದಾರೆ.

key words: Some BJP leaders are in touch with the Congress says bsy