ಮೈಸೂರಿನ ಕೆಲ ನಾಯಕರು ಬಿಜೆಪಿ ಸೇರ್ಪಡೆ ನಿಶ್ಚಿತ- ಸಚಿವ ಎಸ್.ಟಿ ಸೋಮಶೇಖರ್.

ಮೈಸೂರು,ಮೇ,14,2022(www.justkannada.in): ಮೈಸೂರಿನ ಕೆಲ ನಾಯಕರು ಬಿಜೆಪಿಗೆ ಸೇರ್ಪಡೆಯಾಗುವುದು ನಿಶ್ಚಿತ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್,  ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆಯಾಗುತ್ತಾರೆ.  ಬಿಜೆಪಿ ನಾಯಕರ ಜತೆ ಕೊನೇ ಹಂತದ ಚರ್ಚೆ ನಡೆದಿದೆ. ಕಾಂಗ್ರೆಸ್ ಜೆಡಿಎಸ್ ಎರಡು ಪಕ್ಷದವರು ಬಿಜೆಪಿಗೆ ಬರ್ತಾರೆ. ಅವರು ಯಾರು ಅಂತ ಹೇಳಲ್ಲ ಎಂದು ತಿಳಿಸಿದರು.

ಯಾವುದೇ ಕಂಡಿಷನ್ ಗಳಿಲ್ಲದೇ ಬಿಜೆಪಿಗೆ ಬರಲು ಒಪ್ಪಿಕೊಂಡಿದ್ದಾರೆ. ಕೊನೆಯ ಹಂತದ ಮಾತುಕತೆ ಮುಗಿಯಲಿ ಎಲ್ಲವನ್ನೂ ಸ್ಪಷ್ಟಪಡಿಸುತ್ತೇವೆ ಎಂದು ಸಚಿವ ಸೋಮಶೇಖರ್ ಹೇಳಿದರು.

Key words: Some leaders-Mysore – certain -join – BJP-Minister -ST Somashekhar.