Saturday, October 24, 2026

Dasara Wishes

Minister S.T. Somashekar releases Yuva Dasara posters DasraWishes_JK DasraWishes JK
Happy Dasara
Home Front Page ರಾಜಕೀಯ ತೆವಲಿಗೆ ಏನೋನೊ ಮಾತಾಡೋದು ಬೇಡ : ಸಿದ್ದರಾಮಯ್ಯ ವಿರುದ್ಧ ಎಚ್.ಡಿ.ಕೆ ಕಿಡಿ

ರಾಜಕೀಯ ತೆವಲಿಗೆ ಏನೋನೊ ಮಾತಾಡೋದು ಬೇಡ : ಸಿದ್ದರಾಮಯ್ಯ ವಿರುದ್ಧ ಎಚ್.ಡಿ.ಕೆ ಕಿಡಿ

ಬೆಂಗಳೂರು,ಅಕ್ಟೋಬರ್,19,2020(www.justkannada.in) : ರಾಜಕೀಯ ತೆವಲಿಗೆ ಏನೋನೊ ಮಾತಾಡೋದು ಬೇಡ. ನನ್ನ ವಿರುದ್ದ ಟೀಕೆ ಮಾಡೋಕೆ ಬೇರೆ ವಿಚಾರಗಳು ಇಲ್ಲ. ಜನರನ್ನ ಮರಳು ಮಾಡೋಕೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕಿಕೊಂಡು ಹೊರಟಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.jk-logo-justkannada-logo

ಜಾತಿ ಸಮೀಕ್ಷೆ ಬಿಡುಗಡೆಗೆ ಕುಮಾರಸ್ವಾಮಿ ಅಡ್ಡಗಾಲು ಹಾಕಿದ್ರು ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ದ ಆಕ್ರೋಶವ್ಯಕ್ತಪಡಿಸಿದ್ದಾರೆ.

ಸಮ್ಮಿಶ್ರ  ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆಯೇ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ಬೇರೆ ವಿಷಯ ಅವ್ರ ಬಳಿ ಇಲ್ಲ. ಹೀಗಾಗಿ ನನ್ನ ಮೇಲೆ ಅಪಾದನೆ ಮಾಡ್ತಿದ್ದಾರೆ ಎಂದು ಗುಡುಗಿದ್ದಾರೆ.

ಪದೇ ಪದೇ ನನ್ನನ್ನ ಕೆಣಕಬೇಡಿ ಎಚ್ಚರಿಕೆ ಕೊಡ್ತಿದ್ದೇನೆ

Something,talk,about,Not,HDK sparked,against,Siddaramaiah

ಈಗ ಹಿಂದುಳಿದವರ ಬಗ್ಗೆ ಇವ್ರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ ಎಚ್ಚರಿಕೆ ಕೊಡ್ತಿದ್ದೇನೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ತೆವಲಿಗೆ ಸಮಾಜಗಳನ್ನ ನನ್ನ ವಿರುದ್ದ ಎತ್ತಿಕಟ್ಟಿದ್ದೀರಾ ಗೊತ್ತಿದೆ. ರಾಜಕೀಯದ ತೆವಲು ತೀರಿಸಿಕೊಳ್ಳಲು ಹೊರಟಿದ್ದೀರೀ ಎಂದು ಹರಿಹಾಯ್ದಿದ್ದಾರೆ.

ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರ

ಇದು ಬಹಳ ದಿನ ನಡೆಯೊಲ್ಲ. ಯಾಕೆ ನನ್ನನ್ನ ಕೆಣಕುತ್ತೀರಾ. ಅವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಅವತ್ತು ನಾನು ವಿರೋಧ ಮಾಡಿದ್ರೆ ಅವತ್ತೆ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರ. ಸಿದ್ದರಾಮಯ್ಯ ನನ್ನ ಭಯ ಇದೆ. ಜನರಿಂದ ಮತ್ತೆ ಮೇಲೆ ಬರ್ತೀನಿ ಅನ್ನೊ ಸೂಚನೆ ಅವ್ರಿಗೆ ಇದೆ ಎಂದು ಟೀಕಿಸಿದ್ದಾರೆ.

ಕುಮಾರಸ್ವಾಮಿ ಬೇಕು ಅನ್ನೊ ದಿನಗಳು ಬರುತ್ತವೆ

ಈಗ ನನಗೆ ಹಿನ್ನಡೆ ಆಗಿರಬಹುದು. ಆದರೆ, ಈ ರಾಜ್ಯದ ಜನ ಜಾತಿ-ಭೇದ ಮರೆತು ಮತ್ತೆ ಕುಮಾರಸ್ವಾಮಿ ಬೇಕು ಅನ್ನೊ ದಿನಗಳು ಬರುತ್ತವೆ. ಪರೋಕ್ಷವಾಗಿ ಮತ್ತೆ ಸಿಎಂ ಆಗ್ತೀನಿ‌ ಎಂದ ಕುಮಾರಸ್ವಾಮಿ. ಸಿದ್ದರಾಮಯ್ಯಗೆ ಬಿಜೆಪಿ ಕಣ್ಣಿಗೆ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವ್ರಿಗೆ ಜೆಡಿಎಸ್ ಮುಗಿಸಬೇಕು. ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಅ ತಪ್ಪಿಗೆ. ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

key words : Something-talk-about-Not-HDK sparked-against- Siddaramaiah