ಈ ಬಾರಿ ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿ: ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆಯಿದು..

ಬೆಂಗಳೂರು,ಆಗಸ್ಟ್,22,2025 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮಾಚರಣೆಗೆ ಇನ್ನ ಒಂದು ತಿಂಗಳು ಬಾಕಿ ಇದ್ದು ಸಿದ್ದತೆಗಳು ಆರಂಭವಾಗಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ.

ಈ ಬಾರಿ ಸೋನಿಯಾ ಗಾಂಧಿ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವ ಸಾಧ್ಯತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಇದೀಗ ಸಿಎಂ ಸಿದ್ದರಾಮಯ್ಯ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.

ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ,  ಈ ಬಾರಿಯ ದಸರಾ ಮಹೋತ್ಸವವನ್ನು ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಂಧಿಯವರು ಉದ್ಘಾಟಿಸಲಿದ್ದಾರೆ ಎಂಬ ಕಾಲ್ಪನಿಕ ಸುದ್ದಿಯನ್ನು ಕೆಲ ಮಾಧ್ಯಮಗಳು ವರದಿ ಮಾಡಿವೆ. ಇದು ಸತ್ಯಕ್ಕೆ ದೂರವಾದದ್ದು. ಆ ರೀತಿಯ ಉದ್ದೇಶವಾಗಲೀ, ಪ್ರಸ್ತಾವನೆಯಾಗಲಿ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟೀಕರಿಸಿದ್ದಾರೆ.

ಇನ್ನು ದಸರಾ ಉದ್ಘಾಟನೆಗೆ ಯಾರನ್ನ ಕರೆಸಲಾಗುತ್ತದೆ ಎಂಬ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಈ ಬಗ್ಗೆ ಸರ್ಕಾರದ ನಿರ್ಧಾರ ಏನಿದೆ ಎಂಬುದನ್ನ ಕಾದು ನೋಡಬೇಕಿದೆ.

Key words: Sonia Gandhi, inaugurate Dasara, clarification, CM Siddaramaiah