ಸೋನಿಯಾ ಗಾಂಧಿ ಇಡಿ ವಿಚಾರಣೆ ಮುಕ್ತಾಯ: ಮತ್ತೆ ಜುಲೈ 25ಕ್ಕೆ ಹಾಜರಾಗುವಂತೆ ಸೂಚನೆ.

ನವದೆಹಲಿ,ಜುಲೈ,21,2022(www.justkannada.in):  ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿಚಾರಣೆ ಮುಕ್ತಾಯವಾಗಿದ್ದು ಮತ್ತೆ ಜುಲೈ 25 ರಂದು ವಿಚಾರಣೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

ಬೆಳಿಗ್ಗೆ ಸೋನಿಯಾಗಾಂಧಿ ಅವರು ವಿಚಾರಣೆಗೆ ಹಾಜರಾಗಿದ್ದು ಸುಮಾರು 3 ಗಂಟೆಗಳ ಕಾಲ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಇಡಿ ವಿಚಾರಣೆ ಎದುರಿಸಿ ಸೋನಿಯಾ ಗಾಂಧಿಯವರು ಸದ್ಯ ಅವರು ಮನೆಯತ್ತ ತೆರಳಿದ್ದಾರೆ ಎನ್ನಲಾಗಿದೆ.

ಕೋವಿಡ್‌ ಕಾರಣದಿಂದ ಅವರು ತಮಗೆ ಈ ಹಿಂದೆ ನೀಡಿದ್ದ ಇಡಿ ವಿಚಾರಣೆಗೆ ಅವರು ಮುಂದೂಡುವಂತೆ ಮನವಿ ಮಾಡಿದ್ದರು. ಅದರಂತೆ ಸೋನಿಯಾ ಗಾಂಧಿಯವರು ಸದ್ಯ ಕೋವಿಡ್‌ನಿಂದ ಗುಣಮುಖರಾಗಿದ್ದು, ಇಂದು ಇಡಿ ಮುಂದೆ ವಿಚಾರಣೆಗೆ ಹಾಜರಗಿದ್ದರು.

ಇನ್ನು ಸೋನಿಯಾ ಗಾಂಧಿ ಅವರ ಇಡಿ ವಿಚಾರಣೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಸಂಸತ್ ಅಧಿವೇಶನ ಕಲಾಪದಲ್ಲೂ ಕಾಂಗ್ರೆಸ್ ಸದಸ್ಯರು ಧರಣಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

Key words: Sonia Gandhi- ED –  Notice – again – July 25.