Saturday, August 22, 2026

BDA Apartments

Home Front Page ಸೋನಿಯಾ ಗಾಂಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಸೋನಿಯಾ ಗಾಂಧಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಬೆಂಗಳೂರು, ಮಾರ್ಚ್ 04, 2023 (www.justkannada.in): ಅನಾರೋಗ್ಯದಿಂದಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಜ್ಞವೈದ್ಯರ ಮಾರ್ಗದರ್ಶನದಲ್ಲಿ ಸೋನಿಯಾಗಾಂಧಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ‌. ಜ್ವರದಿಂದ ಬಳಲುತ್ತಿರುವ ಸೋನಿಯಾಗಾಂಧಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ವಯೋಸಹಜ ಸಮಸ್ಯೆಯಿಂದ ಹಾಗು ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ.ಡಿಎಸ್ ರಾಣಾ ತಿಳಿಸಿದ್ದಾರೆ.

ನಿನ್ನೆ ಸೋನಿಯಾ ಗಾಂಧಿ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ ಎನ್ನಲಾಗಿದೆ.