ಶಾರ್ಟ್ ಸರ್ಕ್ಯೂಟ್, ಬ್ಯಾಂಕ್ ಆಫ್ ಬರೋಡಾದಲ್ಲಿ  ಬೆಂಕಿ…!

ಮೈಸೂರು,ಜನವರಿ,03,2021(www.justkannada.in) : ಶಾರ್ಟ್ ಸರ್ಕ್ಯೂಟ್ ನಿಂದ ಬ್ಯಾಂಕ್ ಆಫ್ ಬರೋಡಾ ದಲ್ಲಿ  ಬೆಂಕಿ ಅವಘಡ ಸಂಭವಿಸಿದೆ.jk-logo-justkannada-mysoreನಗರದ ಗಾಂಧಿ ವೃತ್ತದ ಬಳಿ ಇರುವ ಬ್ಯಾಂಕ್ ಆಫ್ ಬರೋಡದಲ್ಲಿ ಈ ಘಟನೆ ನಡೆದಿದೆ. ಸುಮಾರು 1:30ರ ಸಮಯಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಈ ಸಂದರ್ಭ ಕಂಪ್ಯೂಟರ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗಾಹುತಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಭಾನುವಾರವಾದ್ದರಿಂದ ಬ್ಯಾಂಕ್ ರಜೆಯಿಂದಾಗಿ ಅನಾಹುತ ತಪ್ಪಿದೆ. ಸ್ಥಳಕ್ಕೆ ಲಷ್ಕರ್ ಪೋಲಿಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

key words : Sort-circuit-Bank of Baroda-Fire …!