ಐಸಿಸಿ ಮುನ್ನೆಡೆಸಲು ಸೌರವ್ ಗಂಗೂಲಿ ಸೂಕ್ತ ವ್ಯಕ್ತಿ ಎಂದ ಪಾಕ್ ಕ್ರಿಕೆಟಿಗ

ದುಬೈ, ಜೂನ್ 08, 2020 (www.justkannada.in): ಆಡಳಿತಾತ್ಮಕ ದೃಷ್ಟಿಯಿಂದ ಸೌರವ್ ಗಂಗೂಲಿ ಐಸಿಸಿ ಅಧ್ಯಕ್ಷರಾದರೆ ಕ್ರಿಕೆಟ್‌ಗೆ ಸಾಕಷ್ಟು ಒಳಿತಾಗುತ್ತದೆ ಎಂದು ಪಾಕ್ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗ್ರೇಮ್ ಸ್ಮಿತ್ ಬಳಿಕ ಪಾಕಿಸ್ತಾನದ ಮಾಜಿ ಸ್ಪಿನ್ನರ್ ಕೂಡ ಸೌರವ್ ಗಂಗೂಲಿ ಐಸಿಸಿ ಅಧ್ಯಕ್ಷರಾಗಲಿ ಎಂದು ಬಯಸಿ ಹೇಳಿಕೆಯನ್ನು ನೀಡಿದ್ದಾರೆ.
ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಯನ್ನು ಮುನ್ನಡೆಸಲು ಯೋಗ್ಯರಾಗಿದ್ದು, ಆ ಹುದ್ದೆಯನ್ನು ಅಲಂಕರಿಸಲು ಆಯಾ ಕ್ರಿಕೆಟ್ ಮಂಡಳಿಗಳು ಬೆಂಬಲಿಸದಿರಲು ಯಾವುದೇ ಕಾರಣವಿಲ್ಲ ಎಂದು ಡ್ಯಾನಿಶ್ ಕನೇರಿಯಾ ಹೇಳಿದ್ದಾರೆ.