Saturday, August 8, 2026

BDA Apartments

Home Front Page ಜಾತಿ ಜನಗಣತಿ ಮೂಲ ಪ್ರತಿ ನಾಪತ್ತೆ ಎಂಬುದು ಸುಳ್ಳು- ಗೃಹ ಸಚಿವ ಡಾ. ಜಿ.ಪರಮೇಶ್ವರ್.

ಜಾತಿ ಜನಗಣತಿ ಮೂಲ ಪ್ರತಿ ನಾಪತ್ತೆ ಎಂಬುದು ಸುಳ್ಳು- ಗೃಹ ಸಚಿವ ಡಾ. ಜಿ.ಪರಮೇಶ್ವರ್.

ಬೆಂಗಳೂರು,ನವೆಂಬರ್,23,2023(www.justkannada.in):  ಜಾತಿ ಜನಗಣತಿ ಮೂಲ ಪ್ರತಿ ನಾಪತ್ತೆಯಾಗಿದೆ ಎಂಬುದು ಸುಳ್ಳು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ವರದಿ ಇನ್ನೂ ಸಲ್ಲಿಕೆಯಾಗಿಲ್ಲ. ಆಯೋಗದವರು ವರದಿಯನ್ನ ಸರ್ಕಾರಕ್ಕೆ ಕೊಟ್ಟ ನಂತರ ಸರ್ಕಾರ ಅದನ್ನ ತೀರ್ಮಾನ ಮಾಡುತ್ತದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಗೆ ಒಂದು ತಿಂಗಳು ಹೆಚ್ಚಿಗೆ ಕಾಲಾವಕಾಶ ನೀಡಲಾಗಿದೆ.  ವರದಿ ಹೊರಗೆ ಬಂದ ನಂತರ ಪರ ವಿರೋಧ ಅಭಿಪ್ರಾಯಗಳು ಕೇಳಿಬರಬಹದು. ಏನೂ ಇಲ್ಲದೇನೆ ಹೀಗೆ ಚರ್ಚೆ ನಡೆಸೋದು ಎಷ್ಟರ ಮಟ್ಟಿಗೆ ಸರಿ.

ವಿರೋಧ ಪಕ್ಷವರು ಕೂಡ ಏನೇನೋ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ವರದಿ ಬಂದ ಮೇಲೆ ತಾನೇ ಅದೆಲ್ಲ ಮಾತನಾಡೋದು  ಎಂದು ಪರಮೇಶ್ವರ್ ಪ್ರತಿಕ್ರಿಯಿಸಿದರು.

Key words: source- copy -caste census – missing – Home Minister -Dr. G. Parameshwar