ಟೆಸ್ಟ್ ಕ್ರಿಕೆಟ್: ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಟೀಂ ಇಂಡಿಯಾ

ಪುಣೆ, ಅಕ್ಟೋಬರ್ 10, 2019 (www.justkannada.in): ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ, ಟೀಮ್ ಇಂಡಿಯಾ ಆರಂಭಿಕ ಆಘಾತ ಅನುಭವಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಭಾರತಕ್ಕೆ, ದಕ್ಷಿಣ ಆಫ್ರಿಕಾ ವೇಗಿ ಕಗಿಸೋ ರಬಾಡ ಅರಂಭದಲ್ಲೇ ಮುಳುವಾಗಿದ್ದಾರೆ.

9ನೇ ಓವರ್​ನ ಕೊನೆಯ ಎಸೆತದಲ್ಲಿ ರೋಹಿತ್ ಶರ್ಮಾ, ರಬಾಡ ಬೌಲಿಂಗ್​ನಲ್ಲಿ ವಿಕೆಟ್ ಕೀಪರ್​ ಕ್ವಿಂಟನ್ ಡಿಕಾಕ್​ಗೆ ವಿಕೆಟ್ ಒಪ್ಪಿಸಿದ್ರು. 35 ಎಸೆತಗಳಲ್ಲಿ 14 ರನ್​ಗಳಿಸಿದ್ದ ರೋಹಿತ್, ಪೆವಿಲಿಯನ್ ಸೇರಿಕೊಂಡಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಟೀಂ ಇಂಡಿಯಾ ಚೇತರಿಕೆ ಆಟ ಪ್ರದರ್ಶಿಸಿದೆ. ಸದ್ಯ 1 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿದೆ.