Monday, September 14, 2026

BDA Apartments

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಇಂದು ಮೈತ್ರಿ ಅಭ್ಯರ್ಥಿ ವಿವೇಕಾನಂದ ನ...
Home Front Page ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಇಂದು ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಇಂದು ಮೈತ್ರಿ ಅಭ್ಯರ್ಥಿ ವಿವೇಕಾನಂದ ನಾಮಪತ್ರ ಸಲ್ಲಿಕೆ

ಮೈಸೂರು, ಮೇ 16, 2024 (www.justkannada.in): ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಮೈಸೂರಿನ ಪ್ರಾದೇಶಿಕ ಅಯುಕ್ತರ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ವಿವೇಕಾನಂದ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಖಾಸಗಿ ಭವನದಲ್ಲಿ ಮೈತ್ರಿ ನಾಯಕರು ಶಿಕ್ಷಕರ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಶಾಸಕ ಜಿಡಿ ಹರೀಶ್ ಗೌಡ, ಶ್ರೀವತ್ಸ, ಮಾಜಿ ಸಚಿವ ಸಾರಾ ಮಹೇಶ್, ಸಿ ಎಸ್ ಪುಟ್ಟರಾಜು ಇತರರು ಪಾಲ್ಗೊಳ್ಳಲಿದ್ದಾರೆ.