ಸೋಯಾಬೀನ್ ಬಿತ್ತನೆ ಮಾಡಿ ನಷ್ಟಕ್ಕೆ ಸಿಲುಕಿದ ರೈತರಿಗೆ ಪರಿಹಾರ ನೀಡಿ-ಶಾಸಕ ಬಂಡೆಪ್ಪ ಕಾಶಂಪೂರ್ ಆಗ್ರಹ

ಬೀದರ್, ಜೂ, 27,2020(www.justkannada.in): ಕೃಷಿ ಇಲಾಖೆಯಿಂದ ಸೋಯಾಬೀನ್ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ಮೊಳಕೆ ಬಾರದೆ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ರೈತರಿಗೆ ಸರ್ಕಾರ ಪರಿಹಾರ ನೀಡಬೇಕು ಹಾಗೂ ಪರ್ಯಾಯವಾಗಿ ಕೂಡಲೇ ಉದ್ದು, ಹೆಸರು ಬೀಜಗಳನ್ನು ಕೃಷಿ ಇಲಾಖೆಯಿಂದ ವಿತರಣೆ ಮಾಡಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಹಾಗೂ ಕೃಷಿ ಸಚಿವರಿಗೆ ಮನವಿ ಮಾಡಿದರು.

ನಗರದ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ‘ಸಹಕಾರ ಇಲಾಖೆ ಹಾಗೂ ಬೀದರ್ ಜಿಲ್ಲೆ ಸಹಕಾರಿ ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ’ ಏರ್ಪಡಿಸಿದ್ದ, ‘ಬೀದರ್ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ’ ಸಮಾರಂಭದಲ್ಲಿ ಶಾಸಕ ಬಂಡೆಪ್ಪ ಕಾಶಂಪೊರ್ ಮಾತನಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ವಿತರಣೆ ಮಾಡಿದ ಸೋಯಾಬೀನ್ ಬೀಜಗಳು ಕಳಪೆ ಗುಣಮಟ್ಟದಲ್ಲಿದ್ದು, ಕಳಪೆ ಗುಣಮಟ್ಟದ ಬೀಜ ವಿತರಣೆ ಮಾಡಿರುವುದನ್ನು  ಕೃಷಿ ಇಲಾಖೆಯವರು ಸಹ ಒಪ್ಪಿಕೊಂಡಿದ್ದಾರೆ. ಹಾಗಾಗಿ ಬೆಳೆ ನಷ್ಟ ಅನುಭವಿಸಿದ ರೈತರ ಜಮೀನುಗಳನ್ನು ಇನ್ನೂ ಮೂರು ನಾಲ್ಕು ದಿನಗಳಲ್ಲಿ ಸರ್ವೇ ನಡೆಸಿ ಪರಿಹಾರ ಘೋಷಣೆ ಮಾಡಬೇಕು.soybean-farmers-loss-compensation-bandappa-kashyapoor-demands

ಮುಖ್ಯಮಂತ್ರಿಗಳು, ಕೃಷಿ ಇಲಾಖೆ ಹಾಗೂ ಕೃಷಿ ಸಚಿವರು ಇಂತಹ ಕಳಪೆ ಗುಣಮಟ್ಟದ ಬೀಜ ವಿತರಣೆಯ ಮೇಲೆ ನಿಗಾ ವಹಿಸಬೇಕು. ಮುಂಗಾರು ಬಿತ್ತನೆ ಮಾಡಿ ಕೈಸುಟ್ಟುಕೊಂಡ ರೈತರು ಪರ್ಯಾಯವಾಗಿ ಉದ್ದು, ಹೆಸರು ಬೆಳೆಯಲು ಪ್ರೋತ್ಸಾಹ ನೀಡಬೇಕೆಂದು ಬಂಡೆಪ್ಪ ಕಾಶಂಪೂರ್ ಆಗ್ರಹಿಸಿದ್ದಾರೆ.

Key words:  soybean -farmers – loss- compensation-Bandappa Kashyapoor -demands