ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು, ಡಿಸೆಂಬರ್ 04, 2022 (www.justkannada.in):  ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಶಕ್ತೀಕರಣ ನಿರ್ದೇಶನಾಲಯದಿಂದ ಆಯೋಜಿಸಿದ್ದ ವಿಶ್ವಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ಜಾರಿಗೆ ತರಲಿದ್ದು, 5 ಲಕ್ಷ ರೂ.ವರೆಗಿನ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಿಎಂ ತಿಳಿಸಿದ್ದಾರೆ.

ಅಂಗವಿಕಲರು ಯಶಸ್ವಿಯಾಗಿ ಬದುಕು ನಡೆಸಲು ಸರಕಾರ ನಿರ್ಮಿಸುವ ಮನೆಗಳಲ್ಲಿ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ವರ್ಕ್‌ ಶಾಪ್‌ ಸ್ಥಾಪಿಸಲು ಸರಕಾರ ಬದ್ಧವಾಗಿದೆ. ಜತೆಗೆ ಅಂಗ ವಿಕಲರಿಗೆ ಮಾ. 31ರೊಳಗೆ ಎರಡು ಸಾವಿರ ವಿದ್ಯುತ್ಛಕ್ತಿಚಾಲಿತ ಟ್ರೈಸಿಕಲ್‌ ನೀಡಲಾಗುತ್ತದೆ. ಅದಕ್ಕಾಗಿ ಈಗಾಗಲೇ 15 ಕೋಟಿ ರೂ. ನೀಡ ಲಾಗಿದ್ದುಎಂದು ಬೊಮ್ಮಾಯಿ ಹೇಳಿದ್ದಾರೆ.