ಎಲ್ಲರನ್ನೂ ತೃಪ್ತಿಪಡಿಸಲು ಆಗಲ್ಲ: ವಿಶೇಷ ಪ್ಯಾಕೇಜ್ ಘೋಷಣೆ ಕುರಿತು ಸಚಿವ ಬಿಸಿ ಪಾಟೀಲ್ ಹೇಳಿಕೆ…

ಬೆಂಗಳೂರು,ಮೇ,20,2021(www.justkannada.in):  ಕೊರೋನಾ ಲಾಕ್ ಡೌನ್ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವು ನಾಯಕರು ಟೀಕೆ ವ್ಯಕ್ತಪಡಿಸಿದ್ದಾರೆ.jk

ಈ  ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ  ಕೃಷಿ ಸಚಿವ ಬಿ.ಸಿ ಪಾಟೀಲ್, ಪ್ಯಾಕೇಜ್ ಘೋಷಣೆ ಸಾಲದು ಎಂಬುದು ನಿಜ. ಆದರೆ ಪ್ಯಾಕೇಜ್ ನಲ್ಲಿ ಎಲ್ಲರನ್ನೂ ತೃಪ್ತಿ ಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇಂದು ಸಿಎಂ ಬಿಎಸ್ ಯಡಿಯೂರಪ್ಪರನ್ನ ಭೇಟಿಯಾದ ಬಳಿಕ ಮಾತನಾಢಿದ ಸಚಿವ ಬಿ.ಸಿ ಪಾಟೀಲ್,ಕೇಂದ್ರ ಸರ್ಕಾರ ಗೊಬ್ಬರಕ್ಕೆ ಸಬ್ಸಿಡಿ ನೀಡಿದೆ. ಕಳೆದ ಒಂದುವರೆ ವರ್ಷದಿಂದ ಕೊರೋನಾ ಮಹಾಮಾರಿ ಇದೆ.  ಆರ್ಥಿಕ ಸಂಕಷ್ಟದ ನಡುವೆ ಸಿಎಂ ಬಿಎಸ್ ಯಡಿಯೂರಪ್ಪ  ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಆದರೆ ಇದರಲ್ಲಿ ಎಲ್ಲರನ್ನೂ ತೃಪ್ತಿಪಡಿಸಲು ಆಗಲ್ಲ ಎಂದರು.

Key words: special -package –announcement-corona-lockdown-minister –BC patil