ವಾಕ್ ಮತ್ತು ಶ್ರವಣ ಸಂಸ್ಥೆಯಿಂದ ನಾಳೆ(ಸೆ.20) B.ASLP ಕಾರ್ಯಕ್ರಮದ ಉದ್ಘಾಟನೆ

ಬೆಂಗಳೂರು,ಸೆಪ್ಟಂಬರ್,19,2025 (www.justkannada.in):  ಬೆಂಗಳೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯ ವತಿಯಿಂದ ನಾಳೆ B.ASLP ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ.

ನಗರದ ಅಗ್ರಹಾರ ದಾಸರಹಳ್ಳಿಯಲ್ಲಿರುವ  ವಾಕ್ ಮತ್ತು ಶ್ರವಣ ಸಂಸ್ಥೆಯ ಸೆಮಿನಾರ್ ಹಾಲ್ ನಲ್ಲಿ ನಾಳೆ ಬೆಳಿಗ್ಗೆ11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು ಮೈಸೂರಿನ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ನಿರ್ದೇಶಕಿ ಡಾ.ಎಂ. ಪುಷ್ಪಾವತಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಗೌರವಾನ್ವಿತ ಅತಿಥಿಯಾಗಿ  ನಿಮಾನ್ಸ್ ನ ಮಾಜಿ ರಿಜಿಸ್ಟ್ರಾರ್ ಡಾ. ಬಿ.ಎಸ್. ಶಂಕರನಾರಾಯಣ ರಾವ್ ಪಾಲ್ಗೊಳ್ಳಲಿದ್ದು ಸರ್ವೋದಯ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ವಿ ನಾರಾಯಣಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಗೌರವಾನ್ವಿತ ಅತಿಥಿಗಳಾದ ಡಾ ರಶ್ಮಿ ಭಟ್, ರಾಧಿಕಾ ಪೂವಯ್ಯ, ಡಾ ಆನಿ ವರ್ಗೀಸ್, ಸಹನಾ ಮುರಳಿಕೃಷ್ಣ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ. ಸಂಸ್ಥೆಯ ನಿರ್ದೇಶಕರಾದ ಡಾ.ಎಂ.ಜಯರಾಂ ಕಾರ್ಯಕ್ರಮದ ರೂವಾರಿಯಾಗಿದ್ದಾರೆ.

Key words: Speech and Hearing Institute , inaugurate, B.ASLP program,