Monday, September 21, 2026

BDA Apartments

Home Front Page ನಟ ದರ್ಶನ್ ಕೇಸ್ ನಲ್ಲಿ ಎಸ್ ಪಿಪಿ ಬದಲಾವಣೆ ವಿಚಾರ- ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ...

ನಟ ದರ್ಶನ್ ಕೇಸ್ ನಲ್ಲಿ ಎಸ್ ಪಿಪಿ ಬದಲಾವಣೆ ವಿಚಾರ- ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಏನು?

ಬೆಂಗಳೂರು, ಜೂನ್ 19,2024 (www.justkannada.in):  ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ. ಎಸ್ ಪಿಪಿ ಬದಲಾವಣೆ ಪ್ರಸ್ತಾವನೆ ನನ್ನ ಮುಂದಿಲ್ಲ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು.  ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ ಎಂದರು.ನಟ ದರ್ಶನ್ ಕೇಸ್ ನಲ್ಲಿ ಎಸ್ ಪಿಪಿ ಬದಲಾವಣೆ ವಿಚಾರ siddaramaiah123

ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು. ಎಸ್. ಪಿ. ಪಿ. ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

Key words: SPP, change, CM, Siddaramaiah