ಶ್ರೀ ಚಂದ್ರಶೇಖರ ಸ್ವಾಮೀಜಿ ನಿಧನ: ಮಾಜಿ ಪ್ರಧಾನಿ ಹೆಚ್ ಡಿಡಿ ಸೇರಿ ಗಣ್ಯರಿಂದ ಸಂತಾಪ.

ಬೆಂಗಳೂರು, ಆಗಸ್ಟ್‌, 16,2025 (www.justkannada.in):  ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ನಿಧನರಾಗಿದ್ದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸೇರಿ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟ್ವೀಟ್  ಮೂಲಕ ಸಂತಾಪ ಸೂಚಿಸಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು,  ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಶ್ರೀಗಳು  ಭೈರವೈಕ್ಯರಾದ  ಸುದ್ದಿ ತಿಳಿದು ಅತೀವ ದುಃಖವಾಗಿದೆ ಸ್ವಾಮೀಜಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ದುಃಖವನ್ನು ಭರಿಸುವ ಶಕ್ತಿ ಭಕ್ತರಿಗೆ ನೀಡಲಿ ಎಂದು ತಿಳಿಸಿದ್ದಾರೆ.

ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರ ನಿಧನಕ್ಕೆ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ಭೈರವೈಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಆಧ್ಯಾತ್ಮ ಲೋಕದಲ್ಲಿ ಮಹೋನ್ನತ ಸಾಧನೆ ಮಾಡಿದ್ದ ಪರಮಪೂಜ್ಯರು ಸಮಾಜ ಸೇವೆ ಹಾಗೂ ಧರ್ಮ ಕೈಂಕರ್ಯದಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದರು. ಪರಮಪೂಜ್ಯರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಕ್ತರಿಗೆ ಶ್ರೀ ಕಾಲ ಭೈರವೇಶ್ವರ ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ  ಎಂದಿದ್ದಾರೆ.

ಹಾಗೆಯೇ ಟ್ವೀಟ್ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ  ಬಿ ವೈ ವಿಜಯೇಂದ್ರ ಅವರು ಸಹ ಸಂತಾಪ ಸೂಚಿಸಿದ್ದು,  ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ವಿಧಿವಶರಾದ ವಿಷಯ ತಿಳಿದು ಅತ್ಯಂತ ನೋವಾಗಿದೆ. ಮಹಾಸ್ವಾಮೀಜಿರವರು ಶ್ರೀ ಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದವರು. ಅಗಲಿಕೆಯ ಆಘಾತದ ನೋವಿನಲ್ಲಿರುವ ಭಕ್ತಾದಿಗಳು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬಿ ವೈ ವಿಜಯೇಂದ್ರ ಅವರು ಪ್ರಾರ್ಥಿಸಿದ್ದಾರೆ.

Key words: Sri Chandrashekhar Swamiji, passes away, condolences.