Monday, September 28, 2026

BDA Apartments

Official invitation BDA JK_Adv BDA Adv
Home Front Page ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಬೆಂಗಳೂರು,ಸೆಪ್ಟಂಬರ್,28,2026 (www.justkannada.in): ಅಕ್ಟೋಬರ್ 11 ರಂದು ನಡೆಯುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಿಸಲು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ಸಿಎಂ ಡಿಕೆ ಶಿವಕುಮಾರ್, ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಪರಮಪೂಜ್ಯ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದರು.

ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಮೌಲ್ಯಗಳ ಪ್ರತೀಕವಾಗಿರುವ ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ.Official invitation dasara dasara 3

ಈ ವೇಳೆ ಸಂಸದ ರಾಜಶೇಖರ್ ಹಿಟ್ನಾಳ್, ಶಾಸಕ ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ವಿಧಾನ ಪರಿಷತ್‌ ಸದಸ್ಯ ಬಸನಗೌಡ ಬಾದರ್ಲಿ ಹಾಗೂ ಜಿಲ್ಲಾಧಿಕಾರಿ ಸುರೇಶ್‌ ಇಟ್ನಾಳ್ ಉಪಸ್ಥಿತರಿದ್ದರು.     Sri Gavisiddeshwara swamiji gavisiddeshwara

ಐತಿಹಾಸಿಕ ದಸರಾ ಮಹೋತ್ಸವಕ್ಕೆ ಎಲ್ಲರೂ ತಪ್ಪದೇ ಬನ್ನಿ… ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳಿ ಎಂದು ಸಿಎಂ ಡಿಕೆ ಶಿವಕುಮಾರ್  ಮನವಿ ಮಾಡಿದ್ದಾರೆ.Dasara inauguration jk02_new jk02 new

 

English Summary
Title

Sri Gavisiddeshwara Swamiji Officially Invited to Inaugurate Mysuru Dasara 2026

Short Description
Sri Abhinava Gavisiddeshwara Mahaswamiji, the revered seer of Koppal Gavimath, has officially accepted the Government of Karnataka's invitation to inaugurate the world-famous Mysuru Dasara 2026 festival. Minister Shivaraj Tangadagi personally visited the Gavimath to present the traditional invitation. The grand state festival (Nada Habba) will commence on October 11, 2026, atop Chamundi Hills, featuring sacred rituals and special pujas. This 10-day celebration concludes on October 21 with the spectacular Jamboo Savari procession.
Keywords
Official invitation, Sri Gavisiddeshwara swamiji, Dasara inauguration