ಕೊರೊನಾ ಸೋಂಕು ಕಡಿಮೆಯಾದರೆ ಡಿಸೆಂಬರ್’ನಲ್ಲಿ ತೆರೆಗೆ ‘ಮದಗಜ’

ಬೆಂಗಳೂರು, ಸೆಪ್ಟೆಂಬರ್ 07, 2021 (www.justkannada.in): ಶ್ರೀಮುರುಳಿ ಮತ್ತು ಆಶಿಕಾ ರಂಗನಾಥ್ ನಟನೆಯ ಮದಗಜ ಸಿನಿಮಾ ಡಿಸೆಂಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ಹೌದು. ಮಹೇಶ್ ಕುಮಾರ್ ಆ್ಯಕ್ಸನ್ ಕಟ್ ಹೇಳುತ್ತಿರುವ ಸಿನಿಮಾ ಕೆಲಸಗಳು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ.

ಈ ಮೊದಲು ಚಿತ್ರತಂಡ ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡಲು ನಿರ್ಧರಿಸಿತ್ತು, ಆದರೆ ಕೊರೋನಾ ಕಡಿಮೆಯಾಗದ ಹಿನ್ನೆಲೆಯಲ್ಲಿ ರಿಲೀಸ್ ದಿನಾಂಕವನ್ನು ಮುಂದೂಡಲಾಗಿತ್ತು.

ಉಮಾಪತಿ ನಿರ್ಮಾಣದ ಮದಗಜ ಸಿನನಿಮಾದಲ್ಲಿ ಶ್ರೀಮುರುಳಿ ಜೊತೆ ಆಶಿಕಾ ರಂಗನಾಥ್ ಮೊದಲ ಬಾರಿಗೆ ನಟಿಸಿದ್ದಾರೆ. ಜಗಪತಿ ಬಾಬು, ದೇವಯಾನಿ, ರಂಗಾಯಣ ರಘು, ಚಿಕ್ಕಣ್ಣ ಮತ್ತು ಶಿವರಾಜು ಕೆಆರ್ ಪೇಟೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.