ಶ್ರೀರಂಗಪಟ್ಟಣ ಡಿವೈಎಸ್ಪಿ ಯೋಗಾನಂದ ಆತ್ಮಹತ್ಯೆಗೆ ಯತ್ನ

ಮಂಡ್ಯ, ಅಕ್ಟೋಬರ್ 13, 2019 (www.justkannada.in): ಶ್ರೀರಂಗಪಟ್ಟಣದ ಪೊಲೀಸ್ ಅಧಿಕಾರಿಯೊಬ್ಬರು ಕೈ ಕಾಲಿನ ನರ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಡಿವೈಎಸ್ ಪಿ ಯೋಗಾನಂದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಅಧಿಕಾರಿ. ಶ್ರೀರಂಗಪಟ್ಟಣ ತಾಲೂಕಿನ ಬಾಬರಾಯನಕೊಪ್ಪಲಿನ ನಿವಾಸದಲ್ಲಿ ಈ ಘಟನೆ ನಡೆದಿದೆ.

ಯೋಗಾನಂದ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಇನ್ನು ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.