SSLC ಅರ್ಧವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು,ಸೆಪ್ಟಂಬರ್,6,2025 (www.justkannada.in): 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.

ಸೆಪ್ಟಂಬರ್ 12 ರಿಂದ  2025-26 ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆ ಪ್ರಾರಂಭವಾಗಿ ಸೆಪ್ಟಂಬರ್ 19ರವರೆಗೆ ನಡೆಯಲಿದೆ.

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಜಾಲತಾಣ www.kseab.karnataka.gov.in ಡೌನ್‌ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮವಹಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

ಪರೀಕ್ಷಾ ವೇಳಾ ಪಟ್ಟಿ ಹೀಗಿದೆ.

Key words: SSLC, Midterm exam,  schedule, announced