ಇಂದೇ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟ- ಶಿಕ್ಷಣ ಸಚಿವ ಸುರೇಶ್ ಕುಮಾರ್.

ಬೆಂಗಳೂರು,ಜೂನ್,28,2021(www.justkannada.in):  ಇಂದೇ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕವನ್ನ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.jk

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಾಲೆ ಆರಂಭ, ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ತಯಾರಿ ಸಂಬಂಧ ಡಿಸಿ, ಸಿಇಓಗಳ ಜತೆ ಸಭೆ ನಡೆಸಲಾಗುತ್ತಿದೆ. ವಿದ್ಯಾಗಮ, ಶಾಲೆ ಆರಂಭದ ಬಗ್ಗೆ ನಿರ್ಧಾರ ಮಾಡಲಾಗುತ್ತದೆ. ಎಲ್ಲವನ್ನೂ ಪರಿಶೀಲಿಸಿ ನಿರ್ಧರಿಸುತ್ತೇವೆ ಎಂದರು.

ಇಂದು ಸುದ್ಧಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದರು. ಹಾಗೆಯೇ ಇಂದೇ ಪಿಯುಸಿ ಫಲಿತಾಂಶದ ದಿನಾಂಕವನ್ನೂ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

Key words: SSLC -Exam Date- Education- Minister -Suresh Kumar.