ಶುಲ್ಕ ಸಮರಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ವಂಚಿತಳಾದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ: ಮನೆಗೆ ಸಚಿವ ಸುರೇಶ್ ಕುಮಾರ್ ಭೇಟಿ.

ಬೆಂಗಳೂರು,ಜುಲೈ,17,2021(www.justkannada.in):   ಶುಲ್ಕ ಪಾವತಿಸದ ಹಿನ್ನೆಲೆ ಎಸ್​ಎಸ್​ಎಲ್​ಸಿ ಪರೀಕ್ಷೆಯಿಂದ ವಂಚಿತಳಾದ  ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.jk

ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ (Alva’s College student) ಗ್ರೀಷ್ಮಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ (Suicide attempt) ಪ್ರಯತ್ನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊರಟಗೆರೆ ಹನುಮಂತಪುರ ಮೂಲದ ವಿದ್ಯಾರ್ಥಿನಿ ಪ್ರತಿಷ್ಠಿತ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯಾಗಿದ್ದು, ಕಳೆದ ವರ್ಷದ ಶಾಲಾ ಶುಲ್ಕ, ವಸತಿ ಮತ್ತು ಊಟದ ಶುಲ್ಕ ಬಾಕಿಯಿರುವ ಕಾರಣಕ್ಕೆ ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

9ನೇ ತರಗತಿಯಲ್ಲಿ ಶೇ.96 ಅಂಕ ಗಳಿಸಿರುವ ವಿದ್ಯಾರ್ಥಿನಿ ಈ ಬಾರಿ ಹಣವಿಲ್ಲದ ಕಾರಣಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳುವುದು (Registration) ಸಾಧ್ಯವಾಗಿಲ್ಲ. ಇದರಿಂದಾಗಿ ವಿದ್ಯಾರ್ಥಿನಿ ಎಸ್ ಎಸ್ ಎಲ್ ಸಿ ಪರೀಕ್ಷೆ ವಂಚಿತಳಾಗಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ ನೇಣುಬಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಈ ವೇಳೆ ಆಕೆಯ ಪೋಷಕರು ರಕ್ಷಣೆ ಮಾಡಿದ್ದಾರೆ.

ಈ ವಿಚಾರ ತಿಳಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಗಸ್ಟ್ ನಲ್ಲಿ ಪರೀಕ್ಷೆಗೆ ಅವಕಾಶ ನೀಡುವ ಭರವಸೆಯನ್ನ ವಿದ್ಯಾರ್ಥಿನಿಗೆ ಕೊಟ್ಟಿದ್ದಾರೆ ಎನ್ನಲಾಗಿದೆ.

Key words: SSLC –exam- fee- student -attempts – suicide