ಎಸ್ ಎಸ್ ಎಲ್ ಸಿ ಪರೀಕ್ಷೆ ವಿಚಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…

ಚಾಮರಾಜನಗರ,ಮಾ,21,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್  ಭೀತಿ ಹೆಚ್ಚಾದ ಹಿನ್ನೆಲೆ ಈಗಾಗಲೇ ಶಾಲಾ ಕಾಲೇಜುಗಳಿಗೆ ಮಾರ್ಚ್ 31ರವರಗೆ ರಜೆ ಘೋಷಣೆ ಮಾಡಲಾಗಿದ್ದು ಪರೀಕ್ಷೆ ಮುಂದೂಡಲಾಗಿದೆ. ಈ ನಡುವೆ ಎಸ್ ಎಸ್ಎಲ್ ಪರೀಕ್ಷ ನಡೆಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಇಂದು ಚಾಮರಾಜನಗರದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನಿಸುತ್ತೇನೆ.  ಸಿಎಂ ಬಿಎಸ್ ಯಡಿಯೂರಪ್ಪ , ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜತೆ ಮಾತುಕತೆ ನಡೆಸುತ್ತೇನೆ. ನಂತರ ಪರೀಕ್ಷೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವ ಬಗ್ಗೆ ಹಲವು ಗೊಂದಲಗಳಿವೆ. ಈಗಾಗಲೇ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.  ಮಾರ್ಚ್ 27ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದೆ.

ಕೊರೋನಾ ಭೀತಿ ಹರಡಿರುವ ಹಿನ್ನೆಲೆ ರಾಜ್ಯದಲ್ಲಿ ಮಾರ್ಚ್ 31ರವರೆಗೆ ಶಾಲಾ ಕಾಲೇಜುಗಳು ಸಿನಿಮಾ ಥಿಯೇಟರ್ಗಳು, ಮಾಲ್ ಗಳು, ಮದುವೆ ಸಭೆ ಸಮಾರಂಭಗಳನ್ನ ಬಂದ್ ಮಾಡಲಾಗಿದೆ.

Key words: SSLC Exam –Issues-Education Minister- Suresh Kumar -reaction